ಬೆಂಗಳೂರು: ಮಾರುಕಟ್ಟೆಯಲ್ಲಿ ತರಕಾರಿ ಬೆಲೆ ಗಗನಕ್ಕೆ ಏರಿಕೆ ಕಾಣುತ್ತಿದೆ. ಈರುಳ್ಳಿ, ಬೆಳ್ಳುಳ್ಳಿ ಬೆಲೆಯಂತೂ ಗಗನಕ್ಕೆ ಏರಿಕೆ ಕಂಡಿದೆ. ಈ ಮಧ್ಯೆ ಟೊಮೆಟೋ ದಿಢೀರ್ ಬೆಲೆ ಏರಿಕೆ ಕಂಡಿದ್ದು, ಗ್ರಾಹಕರಿಗೆ ಸಂಕಷ್ಟಕ್ಕೆ ದಾರಿ ಮಾಡಿಕೊಟ್ಟಿದೆ.
ಒಂದು ವಾರದ ಹಿಂದೆ ಕೆಜಿಗೆ 40 ರೂ. ಇದ್ದ ದರ ಈಗ ಎರಡು ಪಟ್ಟು ಹೆಚ್ಚಳವಾಗಿದೆ. ಶುಕ್ರವಾರದಂದು ಕೆಜಿಗೆ 80 ರೂ. ದರದಲ್ಲಿ ಟೊಮೆಟೋ (Tomato) ಮಾರಾಟವಾಗುತ್ತಿದೆ.
ಅಕಾಲಿಕ ಮಳೆಯಿಂದಾಗಿ (Rain) ಟೊಮೆಟೊ ಇಳುವರಿ ಕುಸಿತಗೊಂಡಿದೆ. ಇದರೊಂದಿಗೆ ನವರಾತ್ರಿ ಹಬ್ಬ ಆರಂಭಗೊಂಡಿದೆ. ಬೇಡಿಕೆ ಜಾಸ್ತಿ ಇದೆ. ಪೂರೈಕೆ ಕಡಿಮೆ ಇರುವ ಹಿನ್ನೆಲೆಯಲ್ಲಿ ಟೊಮೆಟೋ ಬೆಲೆ ದಿಢೀರ್ ಏರಿಕೆಯಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ. ಅಕಾಲಿಕ ಮಳೆಯಿಂದಾಗಿ 1 ಕೆಜಿ ಈರುಳ್ಳಿ ದರ 70 ರೂ. ದಾಟಿದೆ. 1 ಕೆಜಿ ಬೆಳ್ಳುಳ್ಳಿ ದರ 500 ರೂ. ಆಗಿದೆ. ಟೊಮೆಟೋ ದರ ಏರಿಕೆಯಿಂದಾಗಿ ಗ್ರಾಹಕರು ಸಂಕಷ್ಟ ಅನುಭವಿಸುವಂತಾಗಿದೆ.