ಪಣಜಿ: 37ನೇ ಆವೃತ್ತಿಯ ರಾಷ್ಟ್ರೀಯ ಕ್ರೀಡಾಕೂಟಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ್ದಾರೆ.
ಗೋವಾದಲ್ಲಿ ಮೊದಲ ಬಾರಿಗೆ ಕ್ರೀಡಾಕೂಟ ನಡೆಯುತ್ತಿದ್ದು, ಚಾಲನೆ ದೊರೆತಿದೆ. ಗೋವಾದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಕ್ರೀಡಾಕೂಟ ಅ 26 ರಿಂದ ನವೆಂಬರ್ 9ರ ವರೆಗೆ ನಡೆಯಲಿದೆ. 43 ಕ್ರೀಡಾ ವಿಭಾಗಗಳಲ್ಲಿ 10 ಸಾವಿರಕ್ಕೂ ಅಧಿಕ ಕ್ರೀಡಾಪಟುಗಳು ಸ್ಪರ್ಧಿಸಲಿದ್ದಾರೆ. ಟ್ರ್ಯಾಕ್ ಸೈಕ್ಲಿಂಗ್ ಈವೆಂಟ್ ಮತ್ತು ಗಾಲ್ಫ್ ಮಾತ್ರ ಗೋವಾದ ಹೊರಗೆ ದೆಹಲಿಯಲ್ಲಿ ನಡೆಯಲಿದೆ.
ಈ ವೇಳೆ ಗೋವಾ ಸಿಎಂ ಪ್ರಮೋದ್ ಸಾವಂತ್ ಇದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ, ಹಿಂದಿನ ಆಡಳಿತಗಳು ಕ್ರೀಡೆ ಕಡೆಗಣಿಸಿದ್ದವು. ಈಗಿನ ಭಾರತ ಕ್ರೀಡೆಗೆ ಪೂರಕ ವಾತಾವರಣ ಕಲ್ಪಿಸುವ ಮೂಲಕ ದಾಪುಗಾಲಿಡುತ್ತಿದೆ. ಕ್ರೀಡೆಗಾಗಿ ಬಜೆಟ್ ಕಳೆದ 9 ವರ್ಷಗಳ ಹಿಂದೆ ಮಂಡಿಸಿದ್ದಕ್ಕಿಂತ 3 ಪಟ್ಟು ಹೆಚ್ಚಾಗಿದೆ ಎಂದು ಶ್ಲಾಘಿಸಿದ್ದಾರೆ.