ನವದೆಹಲಿ: ಈಗಾಗಲೇ ದೇಶದಲ್ಲಿ ಎರಡು ಹಂತದ ಮತದಾನ ಯಶಸ್ವಿಯಾಗಿ ಮುಗಿದಿದ್ದು, ಮಂಗಳವಾರ ಮೂರನೇ ಹಂತದ ಮತದಾನ ನಡೆಯುತ್ತಿದೆ.
ಈ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಅವರು ಮೇ 14ರಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ. ಲೋಕಸಭೆಯ (Lok Sabha Elections 2024) 57 ಸ್ಥಾನಗಳಿಗೆ ಮತದಾನ ನಡೆಯಲಿರುವ 7ನೇ ಮತ್ತು ಅಂತಿಮ ಹಂತದ ಚುನಾವಣೆಗೆ ಮಂಗಳವಾರದಿಂದ ನಾಮನಿರ್ದೇಶನ ಪ್ರಕ್ರಿಯೆ ಆರಂಭವಾಗಿದೆ. 7ನೇ ಹಂತದ ಮತದಾನವು ಜೂನ್ 1 ರಂದು 7 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಯಲಿದೆ. ಮೇ 14ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.
ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಮೇ 14ರಂದು ವಾರಾಣಸಿಯಿಂದ ನಾಮಪತ್ರ ಸಲ್ಲಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮೇ 13ರಂದು ತಮ್ಮ ಸಂಸದೀಯ ಕ್ಷೇತ್ರಕ್ಕೆ ಭೇಟಿ ನೀಡಿ ಬೃಹತ್ ರೋಡ್ ಶೋ ನಡೆಸಿ ಮೇ 14ರಂದು ನಾಮಪತ್ರ ಸಲ್ಲಿಸಲಿದ್ದಾರೆ. 2014ರಲ್ಲಿ ಇಲ್ಲಿ ಮೋದಿ ಮೊದಲ ಬಾರಿಗೆ ಸ್ಪರ್ಧಿಸಿದ್ದರು.