BJP ಸರ್ಕಾರದ ಭ್ರಷ್ಟರ ಪತ್ರಗಳಿಂದ ಪ್ರಧಾನಿ ಕಚೇರಿಯ ಡ್ರಾಪ್ ಬಾಕ್ಸ್ ತುಂಬಲಿದೆ
ಬೆಂಗಳೂರು : ಬಿಜೆಪಿ ಸರ್ಕಾರದ ಭ್ರಷ್ಟರ ವಿರುದ್ಧದ ಪತ್ರಗಳಿಂದಲೇ ಪ್ರಧಾನಿ ಕಚೇರಿಯ ‘ಡ್ರಾಪ್ ಬಾಕ್ಸ್’ ತುಂಬಲಿದೆ ಎಂದು ರಾಜ್ಯ ಕಾಂಗ್ರೆಸ್ ಕುಟುಕಿದೆ.
40% ಸರ್ಕಾರದ ಮತ್ತೊಬ್ಬ ಸಚಿವರ ವಿರುದ್ಧ ಪ್ರಧಾನಿಗೆ ಮತ್ತೊಂದು ಪತ್ರ ಹೋಗಿದ್ದು, ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ, 40% ಸರ್ಕಾರದ ಮತ್ತೊಬ್ಬ ಸಚಿವರ ವಿರುದ್ಧ ಪ್ರಧಾನಿಗೆ ಮತ್ತೊಂದು ಪತ್ರ. ಬಿಜೆಪಿ ಸರ್ಕಾರದ ಭ್ರಷ್ಟರ ವಿರುದ್ಧದ ಪತ್ರಗಳಿಂದಲೇ ಪ್ರಧಾನಿ ಕಚೇರಿಯ ‘ಡ್ರಾಪ್ ಬಾಕ್ಸ್’ ತುಂಬಲಿದೆ. ‘ನಾ ಖಾನೆದುಂಗಾ’ ಎನ್ನುತ್ತಿದ್ದ ಪ್ರಧಾನಿಗಳು ಇಷ್ಟೆಲ್ಲ ಪತ್ರಗಳು ಹೋದರೂ ‘ನಾ ಬಾತ್ ಕರೂಂಗಾ’ ಎಂಬಂತೆ ಮೌನ ವಹಿಸಿದ್ದಾರೆ..
ಮಾನ್ಯ ಪ್ರಧಾನಿಗಳೇ,
ಹಿಂದೊಮ್ಮೆ ಸಚಿವ ಮುನಿರತ್ನರನ್ನು ಭ್ರಷ್ಟ ಎಂದು ಹೇಳಿದ್ದಿರಿ, ಈಗ ನಿಮ್ಮ ಹೇಳಿಕೆಗೆ ಪೂರಕವೆಂಬಂತೆ ಅವರ ವಿರುದ್ಧ ದೂರು ನಿಮ್ಮ ಮುಂದಿದೆ.'ನಾ ಖಾನೆದುಂಗಾ' ಎನ್ನುತ್ತಿದ್ದ ತಾವು ಈಗ ಕೈಗೊಳ್ಳುವ ಕ್ರಮವೇನು?
ಭ್ರಷ್ಟಾಚಾರಕ್ಕೆ ಹಾಗೂ 40% ಕಮಿಷನ್‌ಗೆ ಬೆಂಬಲಿಸುತ್ತೀರಾ? ಕ್ರಮ ಕೈಗೊಳ್ಳುವಿರಾ?#BJPCorruptionFiles
— Karnataka Congress (@INCKarnataka) July 17, 2022
ತೋಟಗಾರಿಕಾ ಸಚಿವ ಮುನಿರತ್ನರವರ ಕಮಿಷನ್ ಲೂಟಿಯ ಬಗ್ಗೆ ಪ್ರಧಾನಿಗೆ ಪತ್ರ ತಲುಪಿದೆ, ನಿಮಗೂ ಬರಲಿಲ್ಲವೇ ಬಸವರಾಜ ಬೊಮ್ಮಾಯಿ ಅವರೇ? ಹನಿ ನೀರಾವರಿ ವಿತರಕರ ಸಂಘ ನಿಮಗೆ ಪತ್ರ ಬರೆದಿದ್ದರೂ ಕ್ರಮ ಕೈಗೊಳ್ಳದ ತಾವು ಭ್ರಷ್ಟಾಚಾರದ ರಕ್ಷಕನಂತೆ ನಿಂತಿದ್ದೀರಿ. ಈ ಆರೋಪಕ್ಕೆ ತನಿಖೆ ನಡೆಸಿ ‘ಪಾರದರ್ಶಕತೆ’ ನಿರೂಪಿಸುತ್ತೀರಾ?
ಮಾನ್ಯ ಪ್ರಧಾನಿಗಳೇ, ಹಿಂದೊಮ್ಮೆ ಸಚಿವ ಮುನಿರತ್ನರನ್ನು ಭ್ರಷ್ಟ ಎಂದು ಹೇಳಿದ್ದಿರಿ, ಈಗ ನಿಮ್ಮ ಹೇಳಿಕೆಗೆ ಪೂರಕವೆಂಬಂತೆ ಅವರ ವಿರುದ್ಧ ದೂರು ನಿಮ್ಮ ಮುಂದಿದೆ. ‘ನಾ ಖಾನೆದುಂಗಾ’ ಎನ್ನುತ್ತಿದ್ದ ತಾವು ಈಗ ಕೈಗೊಳ್ಳುವ ಕ್ರಮವೇನು? ಭ್ರಷ್ಟಾಚಾರಕ್ಕೆ ಹಾಗೂ 40% ಕಮಿಷನ್‌ಗೆ ಬೆಂಬಲಿಸುತ್ತೀರಾ? ಕ್ರಮ ಕೈಗೊಳ್ಳುವಿರಾ?

ನಮ್ಮದು ಪ್ರಾಮಾಣಿಕ, ಪಾರದರ್ಶಕ ತನಿಖೆ ಎನ್ನುತ್ತಿರುವ ಬಸವರಾಜ ಬೊಮ್ಮಾಯಿ ಅವರೇ, ಬಿಟ್ ಕಾಯಿನ್ ಹಗರಣದ ತನಿಖೆ ಎಲ್ಲಿಯವರೆಗೂ ಬಂದಿದೆ? ಆರೋಪಿ ಶ್ರೀಕಿ ಎಲ್ಲಿ ಹೋದ? ‘ಬಿಟ್ ಕಾಯಿನ್’ ಪದ ಕೇಳಿದಾಕ್ಷಣ ನೀವು ಹಾಗೂ ನಿಮ್ಮ ಪಕ್ಷದ ಅಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಮೌನಕ್ಕೆ ಜಾರುವುದೇಕೆ? ಎಲ್ಲಿ ನಿಮ್ಮ ಪಾರದರ್ಶಕತೆ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.