ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆ 2025
ಕರ್ನಾಟಕ ಸರ್ಕಾರ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆ 2025ಕ್ಕೆ ನೋಂದಣಿ ಪ್ರಕ್ರಿಯೆಯನ್ನು ಡಿಸೆಂಬರ್ 1 ರಿಂದ 31 ರವರೆಗೆ ಆರಂಭಿಸಿದೆ. ಈ ಯೋಜನೆಯಡಿ ನೋಂದಣಿಯಾದ ಸದಸ್ಯರಿಗೆ ಸರ್ಕಾರ ಮಾರ್ಚ್ 1 ರಿಂದ ಐಡಿ ಕಾರ್ಡ್‌ಗಳನ್ನು ನೀಡಲಿದೆ.
ಅರ್ಹತೆಗಳು:
ರಾಜ್ಯದಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿರುವ ಯಾವುದೇ ಸಹಕಾರ ಸಂಘ/ ಬ್ಯಾಂಕ್‌ಗಳ ಸದಸ್ಯರು ಅಥವಾ ಸಹಕಾರಿ ಸ್ವ-ಸಹಾಯ ಗುಂಪುಗಳ ಸದಸ್ಯರು ನೋಂದಣಿ ಮಾಡಿಕೊಳ್ಳಬಹುದು.
ಖಾಸಗಿ ಕಂಪನಿ ಅಥವಾ ಇತರೆ ಸಂಸ್ಥೆಗಳಲ್ಲಿ ಮಾಸಿಕ 30,000 ರೂ.ಗಿಂತ ಹೆಚ್ಚು ವೇತನ ಪಡೆಯುವವರು ಯಶಸ್ವಿನಿ ಯೋಜನೆಗೆ ನೋಂದಣಿ ಮಾಡಿಕೊಳ್ಳುವುದಕ್ಕೆ ಅರ್ಹತೆ ಹೊಂದಿರುವುದಿಲ್ಲ
ಯೋಜನೆಯ ಪ್ರಮುಖ ಅಂಶಗಳು:
ಯಶಸ್ವಿನಿ ಜಾಲದ ಆಸ್ಪತ್ರೆಗಳಲ್ಲಿ ಒಂದು ಕುಟುಂಬ ₹ 5 ಲಕ್ಷವರೆಗಿನ ವೆಚ್ಚದಲ್ಲಿ ನಗದುರಹಿತ ಚಿಕಿತ್ಸೆ ಪಡೆಯಬಹುದು.
2025 ಏಪ್ರಿಲ್ 1 ರಿಂದ ಫಲಾನುಭವಿಗಳು ನಗದು ರಹಿತ ಚಿಕಿತ್ಸೆ ಪಡೆಯಬಹುದಾಗಿದೆ.
ನೋಂದಣಿ ಪ್ರಕ್ರಿಯೆ:
ಡಿಸೆಂಬರ್ 1 ರಿಂದ 31ರವರೆಗೆ ನೋಂದಣಿ ಪ್ರಕ್ರಿಯೆ ಮುಂದುವರೆಯಲಿದೆ.
ನೋಂದಣಿಯಾದ ಸದಸ್ಯರಿಗೆ ಯೂನಿಕ್ ಐಡಿ ಸಂಖ್ಯೆಯುಳ್ಳ ಕಾರ್ಡ್ ಅನ್ನು ಮುಂದಿನ ವರ್ಷದ ಮಾರ್ಚ್ 1 ರಿಂದ ನೀಡಲಾಗುವುದು.
ಗ್ರಾಮೀಣ ಪ್ರದೇಶದ ಒಂದು ಕುಟುಂಬದಲ್ಲಿ ನಾಲ್ಕು ಜನರಿದ್ದರೆ ಆ ಕುಟುಂಬವು ₹500 ವಂತಿಗೆ ಭರಿಸಬೇಕು. ನಾಲ್ಕಕಿಂತ ಹೆಚ್ಚು ಸದಸ್ಯರಿದ್ದರೆ ತಲಾ ₹100 ಹೆಚ್ಚುವರಿ ವಂತಿಗೆ ನೀಡಬೇಕು. ನಗರ ಪ್ರದೇಶದ ಒಂದು ಕುಟುಂಬದಲ್ಲಿ ನಾಲ್ಕು ಜನರಿದ್ದರೆ ₹1,000 ಹಾಗೂ ಅದಕ್ಕಿಂತ ಹೆಚ್ಚು ಜನರಿದ್ದರೆ ತಲಾ ₹200 ನಿಗದಿ ಮಾಡಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರಿಂದ ಯಾವುದೇ ವಂತಿಗೆ ಸಂಗ್ರಹಿಸುವಂತಿಲ್ಲ ಎಂದು ತಿಳಿಸಲಾಗಿದೆ.
ಈ ಯೋಜನೆಯು ರಾಜ್ಯದ ಜನತೆಗೆ ಸುಲಭ ಮತ್ತು ಕೈಗೆಟುಕುವ ವೈದ್ಯಕೀಯ ಸೇವೆಗಳನ್ನು ಒದಗಿಸಲು ಸಹಕಾರಿಯಾಗಲಿದೆ.