ವಿಜಯಪುರ: ಕೃಷ್ಣಾ ನದಿಯಲ್ಲಿ (Krishna River) ತೆಪ್ಪ ಮುಗುಚಿ ಬಿದ್ದ ಪರಿಣಾಮ 6 ಜನ ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ವಿಜಯಪುರ (Vijayapura) ಜಿಲ್ಲೆಯ ಕೊಲ್ಹಾರ ತಾಲೂಕಿನ ಬಳೂತಿ ಜಾಕವೆಲ್ ಹತ್ತಿರದ ಕೃಷ್ಣಾ ನದಿಯಲ್ಲಿ ನಡೆದಿದೆ. ಈ ವೇಳೆ 6 ಜನ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಆದರೆ, ಓರ್ವ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು, ಅವರನ್ನು ಪುಂಡಲಿಕ ಎಂಕಂಚಿ (34) ಎಂದು ಗುರುತಿಸಲಾಗಿದೆ. ಉಳಿದವರ ಶೋಧ ಕಾರ್ಯ ಮುಂದುವರೆದಿದೆ.
ನದಿ ಆಚೆಯ ನಡುಗಡ್ಡೆಗೆ ತೆರಳಿ ಮರಳಿ ಬರುತ್ತಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ. ಸ್ಥಳಕ್ಕೆ ಭೇಟಿ ನೀಡಿ ಕೊಲ್ಹಾರ ಠಾಣೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಹೆಚ್ಚುವರಿ ಎಸ್ಪಿ ಶಂಕರ ಮಾರಿಹಾಳ ಸ್ಥಳಕ್ಕೆ ಭೇಟಿ ನೀಡಿದ್ದಾರೆ.