ಬೆಂಗಳೂರು : ಸ್ಯಾಂಡಲ್ ವುಡ್ ನ ಯುವ ಸಾಮ್ರಾಟ್, ನಟ ಚಿರಂಜೀವಿ ಸರ್ಜಾ ವಿಧಿವಶರಾಗಿ ಇಂದಿಗೆ ಒಂದು ವಾರ ಕಳೆದಿದೆ. ಅವರ ಅಕಾಲಿಕ ನಿಧನ ಚಂದನವನಕ್ಕೆ ಆಘಾತ ನೀಡಿದ್ದು, ಈಗಲೂ ಸರ್ಜಾ ಕುಟುಂಬಸ್ಥರು ಚಿರು ಅಗಲಿಕೆಯ ನೋವಿನಲ್ಲಿದ್ದಾರೆ. ಸೋಶಿಯಲ್ ಮೀಡಿಯಾಗಳ ಮೂಲಕ ಧ್ರುವ ಸರ್ಜಾ, ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯ, ಚಿರು ಜೊತೆಗಿನ ಫೋಟೋಗಳನ್ನು ಹಂಚಿಕೊಂಡು ನೋವು ಹೇಳಿಕೊಳ್ಳುತ್ತಿದ್ದಾರೆ. ಏತನ್ಮಧ್ಯೆ ನಟ ರಾಘವೇಂದ್ರ ರಾಜ್ ಕುಮಾರ್, ಸರ್ಜಾ ಫ್ಯಾಮಿಲಿಯನ್ನು ಭೇಟಿಯಾಗಿ ಸಾಂತ್ವನ ಹೇಳಿದ್ದಾರೆ.
ರಾಘವೇಂದ್ರ ರಾಜ್ ಕುಮಾರ್ ಜೊತೆಗೆ ಅವರ ಪುತ್ರರಾದ ಯುವ ರಾಜ್ ಕುಮಾರ್ ಹಾಗೂ ವಿನಯ್ ರಾಜ್ ಕುಮಾರ್ ಕೂಡ ಸರ್ಜಾ ಅವರ ಮನೆಗೆ ತೆರಳಿ ಕುಟುಂಬಸ್ಥರನ್ನ ಮಾತನಾಡಿಸಿ, ಸಾಂತ್ವನ ಹೇಳಿದ್ದಾರೆ.








