ಮುಂದಿನ 48 ಗಂಟೆ ಮತ್ತಷ್ಟು ಚುರುಕಾಗಲಿದೆ ಮಳೆ rain
ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದಲ್ಲಿ ಭಾರಿ ವರ್ಷಧಾರೆ ಆಗುತ್ತಿದೆ.
ಈ ಮಳೆಯೂ ಮುಂದಿನ 48 ಗಂಟೆಗಳ ಕಾಲದಲ್ಲಿ ಮತ್ತಷ್ಟು ಚುರುಕಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಮತ್ತು ಬಳ್ಳಾರಿಯಲ್ಲಿ ಇಂದು ಭಾರಿ ಮಳೆಯಾಗಲಿದೆ.
ಈ ಹಿನ್ನೆಲೆ ಎಲ್ಲಾ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಇತ್ತ ಮೈಸೂರು, ಮಂಡ್ಯ, ರಾಮನಗರ ಮತ್ತು ಚಾಮರಾಜನಗರದಲ್ಲಿ ಮುಂದಿನ 24 ಗಂಟೆ ಯೆಲ್ಲೋ ಅಲರ್ಟ್ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.