ಉಡುಪಿಯ ಪಡುಬಿದ್ರೆಗೆ ಭೇಟಿ ನೀಡಿದ ಕಂದಾಯ ಸಚಿವ ಆರ್. ಅಶೋಕ್
ಕಂದಾಯ ಸಚಿವ ಆರ್. ಅಶೋಕ್ ಅವರು ಮಳೆಯಿಂದ ಹಾನಿಯಾದ ಪ್ರದೇಶಗಳಿಗೆ ಇಂದಿನಿಂದ ಭೇಟಿ ನೀಡುತ್ತಿದ್ದಾರೆ. ಸಿಎಂ ಜೊತೆ ಸಂಪರ್ಕದಲ್ಲಿದ್ದ ಕಾರಣ ಸಚಿವ ಆರ್. ಅಶೋಕ್ ಅವರು ಇಷ್ಟು ದಿನ ಸೆಲ್ಫ್ ಕ್ವಾರಂಟೈನ್ ನಲ್ಲಿದ್ದರು. ಇಂದು ಉಡುಪಿ ಜಿಲ್ಲೆಗೆ ಭೇಟಿ ನೀಡಿ ಮಳೆಯಿಂದ ಹಾನಿಯಾಗಿರುವ ಪ್ರದೇಶಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಹಾಗೇ ನಿರಾಶ್ರಿತ ಕೇಂದ್ರಗಳಿಗೂ ಭೇಟಿ ನೀಡಿ ಸೂಕ್ತ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.
ಉಡುಪಿ ಜಿಲ್ಲಾಧಿಕಾರಿಯಿಂದ ಮಾಹಿತಿ ಪಡೆದುಕೊಂಡಿರುವ ಆರ್. ಅಶೋಕ್ ಅವರು ಉಡುಪಿ ಜಿಲ್ಲೆಗೆ ಸ್ಥಳದಲ್ಲೇ 5 ಕೋಟಿ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ. ಪಡುಬಿದ್ರೆಯಲ್ಲಿ ಕಡಲು ಕೊರೆತದಿಂದ ಅಪಾರ ಪ್ರಮಾಣದ ಹಾನಿಯಾಗಿದೆ. ಉಡುಪಿ-ಕುಂದಾಪುರದಲ್ಲಿ 128 ಮಿಲಿಮೀಟರ್ ಮಳೆಯಾಗಿದೆ. ನಿರಂತರವಾಗಿ ಸುರಿದ ಮಳೆಯಿಂದಾಗಿ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ. ಜನ ಜೀವನವಂತೂ ಅಸ್ತವ್ಯಸ್ತಗೊಂಡಿದೆ. ಸಚಿವ ಆರ್. ಅಶೋಕ್ ಜೊತೆ ಸಚಿವರಾದ ಕೋಟಾ ಶ್ರೀನಿವಾಸ್ ಪೂಜಾರಿ, ಉಡುಪಿ ಜಿಲ್ಲಾಧಿಕಾರಿ ಸೇರಿದಂತೆ ಅಧಿಕಾರಿಗಳು ಮತ್ತು ಸ್ಥಳೀಯ ನಾಯಕರು ಸಾಥ್ ನೀಡಿದ್ರು.
ಇನ್ನು ನೆರೆ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ಸಭೆಯನ್ನು ಕಂದಾಯ ಸಚಿವರು ಸಭೆ ನಡೆಸಿ ಮಾಹಿತಿ ಪಡೆದುಕೊಳ್ಳಲಿದ್ದಾರೆ








