ಬೆಂಗಳೂರು: ಪಾದರಾಯನಪುರ ಗಲಾಟೆಯಲ್ಲಿ ಭಾಗಿಯಾದವರಿಗೆ ಕಠಿಣ ಶಿಕ್ಷೆ ನೀಡಬೇಕೆಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರೋ ಅವರು, ” ಪಾದರಾಯನಪುರದಲ್ಲಿ ನಡೆದಿರುವ ಗಲಭೆ ಅತ್ಯಂತ ದುರದೃಷ್ಟಕರ. ಇಂತಹ ಘಟನೆಗಳು ಪುನರಾವರ್ತನೆಯಾಗದಂತೆ ತಡೆಯಬೇಕಾದರೆ ದುಷ್ಕೃತ್ಯದಲ್ಲಿ ತೊಡಗಿರುವವರನ್ನು ಗುರುತಿಸಿ ಕಠಿಣ ಶಿಕ್ಷೆಗೊಳಪಡಿಸಬೇಕು ಎಂದು ಸಿಎಂ ಯಡಿಯೂರಪ್ಪ ಅವರನ್ನು ಒತ್ತಾಯಿಸುತ್ತೇನೆ”.
” ಕೊರೊನಾ ಸೋಂಕಿನಿಂದ ನಮ್ಮನ್ನು ರಕ್ಷಿಸಲು ವೈದ್ಯಕೀಯ ಮತ್ತು ಪೊಲೀಸ್ ಸಿಬ್ಬಂದಿ ಆರೋಗ್ಯವನ್ನು ಪಣಕ್ಕಿಟ್ಟು ಶ್ರಮಿಸುತ್ತಿದ್ದಾರೆ. ಅವರಿಗೆ ಸಹಕರಿಸುವುದು ನಮ್ಮ ಕರ್ತವ್ಯ. ಗಾಳಿ ಸುದ್ದಿಯಿಂದ ಪ್ರಚೋದನೆಗೊಳಗಾಗದೆ ಜನ ಸಂಯಮದಿಂದ ವರ್ತಿಸಬೇಕೆಂದು ರಾಜ್ಯದ ಜನರಲ್ಲಿ ಮನವಿ ಮಾಡುತ್ತೇನೆ”ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
BBK-11 ಹೌದು ಬಾಸ್:ಈ ವಾರ ಡಬಲ್ ಎಲಿಮಿನೇಷನ್
ಹೌದು ಬಾಸ್..! ಬಿಗ್ ಬಾಸ್ ಕನ್ನಡ ಸೀಸನ್ 11 ಹೆಚ್ಚು ರೋಚಕವಾಗುತ್ತಿದೆ! ಈ ವಾರ ಡಬಲ್ ಎಲಿಮಿನೇಷನ್ ಸುದ್ದಿ ಕೇಳಿ ಬಂದಿರುವುದು ಒಂದು ಬದಿಯಿಂದ ಖುಷಿಯಾದರೂ, ಮತ್ತೊಂದೆಡೆ...