ರಾಯಚೂರು: ತರಗತಿ ನಡೆಯುತ್ತಿದ್ದಾಗಲೇ ಶಾಲೆಯ ಮೇಲ್ಛಾವಣಿ ಕುಸಿದಿದ್ದು, ಓರ್ವ ವಿದ್ಯಾರ್ಥಿ ಗಾಯಗೊಂಡಿರುವ ಘಟನೆ ನಡೆದಿದೆ.
ಈ ಘಟನೆ ಜಿಲ್ಲೆಯ ದೇವದುರ್ಗ(Devadurga)ದ ಸರ್ಕಾರಿ ಬಾಲಕಿಯರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಪರಿಣಾಮ 7ನೇ ತರಗತಿಯ ವಿದ್ಯಾರ್ಥಿನಿ ಶ್ರೀದೇವಿ ಗಾಯಗೊಂಡಿದ್ದು, ಬಲಗಾಲಿನ ಬೆರಳು ಕಟ್ ಆಗಿದೆ ಎನ್ನಲಾಗಿದೆ. ವಿದ್ಯಾರ್ಥಿನಿಯನ್ನು ಕೂಡಲೇ ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಕುರಿತು ಈ ಕುರಿತು ದೇವದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.