ಸರ್ವೋದಯ ದಿನ ಕಸಾಯಿಖಾನೆಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ನಿಷೇಧ Sarvoday Divas
ಬೆಂಗಳೂರು; ರಾಜಧಾನಿಯಲ್ಲಿ ಜನವರಿ 30 ರಂದು ಬಿಬಿಎಂಪಿ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ ಎಂದು ಬಿಬಿಎಂಪಿ ಆದೇಶ ಹೊರಡಿಸಿದೆ.
ಜನವರಿ 30ರಂದು ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ Mahatma Gandi ಹುತಾತ್ಮರಾದ ದಿನ. ಈ ದಿನವನ್ನು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತದೆ. ಗಾಂಧೀಜಿಯವರು ಶಾಂತಿ ಪ್ರಿಯರು, ಅಹಿಂಸಾವಾದಿಗಳು. ಆ ದಿನ ಎಲ್ಲೆಡೆ ಗಾಂಧೀಜಿ ಸ್ಮರಣೆ ಮಾಡಲಾಗುವುದು ಎಂದು ಹೇಳಿದ್ದಾರೆ.
ಈ ಹಿನ್ನಲೆಯಲ್ಲಿ ಬಿಬಿಎಂಪಿ ವ್ಯಪ್ತಿಯಲ್ಲಿ ಬರುವ ಕಸಾಯಿಖಾನೆಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ ಎಂದು ಜಂಟಿ ನಿರ್ದೇಶಕರು (ಪಶುಪಾಲನೆ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.