ಬೆಂಗಳೂರು: ಪಾಕ್ ಪರ ಘೋಷಣೆ ಕೂಗಿದ ಇಬ್ಬರು ಕಿಡಿಗೇಡಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಜೆಪಿನಗರ ಪೊಲೀಸರು (Police) ಇಬ್ಬರನ್ನು ಬಂಧಿಸಿದ್ದಾರೆ. ಇನಾಯತ್ ಉಲ್ಲಾ ಖಾನ್, ಸೈಯದ್ ಮುಬಾರಕ್ ಬಂಧಿತ ಆರೋಪಿಗಳು ಎನ್ನಲಾಗಿದೆ. ನಗರದಲ್ಲಿನ ಪಬ್ ನಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ಮ್ಯಾಚ್ ಸಂದರ್ಭದಲ್ಲಿ ಹಲವರು ಭಾರತ ಗೆಲ್ಲುತ್ತಿದ್ದಂತೆ ಸಂತಸದಲ್ಲಿ ಭಾರತ ಪರ ಘೋಷಣೆ ಕೂಗಿದ್ದಾರೆ. ಈ ಸಂದರ್ಭದಲ್ಲಿ ಬಂಧಿತರು ಪಾಕ್ ಪರ ಘೋಷಣೆ ಕೂಗಿದ್ದಾರೆ.
ಪಾಕ್ ಪರ ಘೋಷಣೆ ಕೂಗುತ್ತಿದ್ದಂತೆ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಗ ಅಲ್ಲಿಂದ ಕಿಡಿಗೇಡಿಗಳು ಪರಾರಿಯಾಗಿದ್ದಾರೆ. ಸದ್ಯ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.