ಮಂಗಳೂರು: ಮಲೆನಾಡು ಸೇರಿದಂತೆ ಕರಾವಳಿ ಪ್ರದೇಶದಲ್ಲಿ ಮತ್ತೆ ನಕ್ಸಲರ ಹಾವಳಿ ಹೆಚ್ಚಾಗಿದೆ.
ಐದು ವರ್ಷಗಳ ನಂತರ ಜಿಲ್ಲೆಯಲ್ಲಿ ನಕ್ಸಲರು ಮತ್ತೆ ಕಾಣಿಸಿಕೊಂಡಿದ್ದಾರೆ. ಕಡಮಕಲ್ಲು ಹತ್ತಿರ ಕೂಜಿಮಲೆ ರಬ್ಬರ್ ಎಸ್ಟೇಟ್ ಬಳಿ ಅಂಗಡಿಯೊಂದಕ್ಕೆ ತೆರಳಿದ್ದ 8 ಜನ ನಕ್ಸಲರು ದಿನಿಸಿ ಖರೀದಿಸಿದ್ದಾರೆ. ಈ ಕುರಿತು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.
ಹೀಗಾಗಿ ಪೊಲಿಸರು ನಕ್ಸಲರಿಗಾಗಿ ತೀವ್ರ ಶೋಧ ನಡೆಸಿದ್ದಾರೆ. ನಕ್ಸಲರು ಕೊಡಗು ಮತ್ತು ಮಂಗಳೂರು ಗಡಿಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಕೂಜಿಮಲೆ, ಕಲ್ಮಕಾರ್ಕ್ಕೆ ನಕ್ಸಲ್ ನಿಗ್ರಹ ಪಡೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ.
1990 ರಿಂದ 2012ರ ವರೆಗೆ ರಾಜ್ಯದಲ್ಲಿ ನಕ್ಸಲರ ಹಾವಳಿ ಹೆಚ್ಚಾಗಿತ್ತು. 40 ರಿಂದ 45 ಸಕ್ರಿಯ ಸಶಸ್ತ್ರ ನಕ್ಸಲರು ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಬೀದರ್, ರಾಯಚೂರು, ಬಳ್ಳಾರಿ ಮತ್ತು ತುಮಕೂರು ಜಿಲ್ಲೆಗಳಲ್ಲಿ ಕಾಣಿಸಿಕೊಂಡಿದ್ದರು. 11 ಎನ್‌ಕೌಂಟರ್‌ಗಳಲ್ಲಿ 19 ನಕ್ಸಲರು ಸಾವನ್ನಪ್ಪಿದ್ದರು