ಬೆಂಗಳೂರು: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಇಂದಿನಿಂದ ಆರಂಭವಾಗಲಿದೆ.
ಲಿದೆ. ರಾಜ್ಯಾದ್ಯಂತ ಈ ಬಾರಿ 1,124 ಕೇಂದ್ರಗಳಲ್ಲಿ 6.98 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸುತ್ತಿದ್ದು, ಮಾ. 22ರ ವರೆಗೆ ಪರೀಕ್ಷೆಗಳು ನಡೆಯಲಿವೆ. ಪರೀಕ್ಷೆಗಳು ಬೆಳಿಗ್ಗೆ 10.15ರಿಂದ ಮಧ್ಯಾಹ್ನ 1.30ರ ವರೆಗೆ ನಡೆಯಲಿವೆ.
ಈ ಸಲ 6,98,624 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುತ್ತಿದ್ದಾರೆ. 2023-24 ಸಾಲಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ 80-20 ಮಾದರಿಯಲ್ಲಿ ಇರುತ್ತದೆ. ವಿದ್ಯಾರ್ಥಿಗಳು ಲಿಖಿತ ರೂಪದಲ್ಲಿ 80 ಅಂಕಗಳಿಗೆ ಪರೀಕ್ಷೆ ಬರೆಯುತ್ತಾರೆ. ಉಳಿದ 20 ಅಂಕಗಳು ಆಂತರಿಕ ಮೌಲ್ಯಮಾಪನದ ಮೂಲಕ ನೀಡಲಾಗುತ್ತದೆ.
ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳು ಸಾರಿಗೆ ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ. ವಿದ್ಯಾರ್ಥಿಗಳು ತಮ್ಮ ಹಾಲ್ ಟಿಕೆಟ್ ತೋರಿಸಿ ಬಸ್‌ನಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ಎಲ್ಲ ರೀತಿಯ ಬಸ್ ಗಳಲ್ಲಿ ಅವರು ಉಚಿತವಾಗಿ ಪ್ರಯಾಣಿಸಬಹುದು.
ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ಯಾವುದೇ ಪರೀಕ್ಷಾ ಅಕ್ರಮಗಳು ನಡೆಯದಂತೆ ನೋಡಿಕೊಳ್ಳಲು ಕ್ರಮ ವಹಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿಮ ಝರಾಕ್ಸ್ ಅಂಗಡಿಗಳು ಬಂದ್ ಆಗಲಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ.