ಬೆಂಗಳೂರು : ನಾಳೆ ದ್ವಿತೀಯ ಪಿಯುಸಿಯ ಫಲಿತಾಂಶ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆ ಬೆಳಿಗ್ಗೆ 11 ಗಂಟೆಗೆ ದ್ವಿತೀಯ ಪಿಯುಸಿಯ ಫಲಿತಾಂಶ ಪ್ರಕಟಗೊಳ್ಳಲಿದೆ. ಕೋವಿಡ್ 19 ಸೋಂಕು ಸಂಕಷ್ಟದ ಸಮಯದಲ್ಲಿ ವಿದ್ಯಾರ್ಥಿಗಳು ಅಥವಾ ಪಾಲಕರು ಕಾಲೇಜಿಗೆ ಭೇಟಿ ನೀಡುವುದು ಬೇಡ. ಫಲಿತಾಂಶದ ಮಾಹಿತಿಯನ್ನು ವಿದ್ಯಾರ್ಥಿಗಳು ಅಥವಾ ಅವರ ಪಾಲಕರ ಮೊಬೈಲ್ ಗೆ ಎಸ್ ಎಂ ಎಸ್ ಮೂಲಕ ಕಳುಹಿಸಿಕೊಡಲಾಗುವುದು ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.








