ಕಿರಾತಕರ ಗುಂಪೊಂದು ಯುವತಿಗೆ ಲೈಂಗಿಕ ಕಿರುಕುಳ ನೀಡುವುದನ್ನು ವಿರೋಧಿಸಿದ್ದಕ್ಕೆ ಎಣ್ಣೆ ಕಡಾಯಿಗೆ ತಳ್ಳಿರುವ ಘಟನೆಯೊಂದು ವರದಿಯಾಗಿದೆ.
ಈ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಆಯಿಲ್ ಮಿಲ್ನಲ್ಲಿ ಕೆಲಸ ಮಾಡುತ್ತಿದ್ದ ದಲಿತ ಯುವತಿಗೆ ಕಿರಾತಕರು ಪ್ರತಿದಿನ ಕಿರುಕುಳ ನೀಡುತ್ತಿದ್ದರು. ಇದನ್ನು ವಿರೋಧಿಸಿದ್ದಕ್ಕೆ ಬಿಸಿ ಎಣ್ಣೆಯ ಕಡಾಯಿಗೆ ತಳ್ಳಿದ್ದಾರೆ. ಯುವತಿಯ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ದೆಹಲಿಗೆ ಸ್ಥಳಾಂತರಿಸಲಾಗಿದೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮಿಲ್ ಮಾಲೀಕ ಸೇರಿ ಮೂವರನ್ನು ಬಂಧಿಸಿದ್ದಾರೆ.