ADVERTISEMENT
Wednesday, November 12, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಸೂತಕದ ಮನೆಯಾದ ಕರ್ನಾಟಕ, ಸರ್ಕಾರದಿಂದಾಗಿ ಎಲ್ಲರೂ ಆತ್ಮಹತ್ಯೆಗೆ ಶರಣು: ಪ್ರತಿಪಕ್ಷ ನಾಯಕ ಆರ್‌.ಅಶೋಕ

The Siddaramaiah-led Congress government has failed on all fronts.

Shwetha by Shwetha
February 5, 2025
in ರಾಜ್ಯ, Newsbeat, Politics, State, ರಾಜಕೀಯ
Share on FacebookShare on TwitterShare on WhatsappShare on Telegram

ಕಾಂಗ್ರೆಸ್‌ ಸರ್ಕಾರದಿಂದಾಗಿ ಕರ್ನಾಟಕ ಸೂತಕದ ಮನೆಯಾಗಿದೆ. ಆರ್ಥಿಕ ವ್ಯವಸ್ಥೆ ಹದಗೆಟ್ಟಿರುವುದರಿಂದ ಜನರು ದಾರಿ ಕಾಣದೆ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಬಳಿಕ ಕರ್ನಾಟಕ ಸೂತಕದ ಮನೆಯಾಗಿದೆ. ಮೈಕ್ರೋ ಫೈನಾನ್ಸ್‌ಗಳಿಂದ ಆತ್ಮಹತ್ಯೆ ನಡೆಯುತ್ತಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರು ಸಾಯುತ್ತಿದ್ದಾರೆ. ಗುತ್ತಿಗೆದಾರರು ಹಣವಿಲ್ಲದೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಶೇ.60 ರ ಕಮಿಶನ್‌ ದಂಧೆಯಿಂದಾಗಿ ಅಧಿಕಾರಿಗಳು ಸಾಯುತ್ತಿದ್ದಾರೆ. ಇದರ ಜೊತೆಗೆ ಬಾಲಕಿಯರ ಮೇಲೆ ಅತ್ಯಾಚಾರ, ಕೊಲೆ, ಬ್ಯಾಂಕ್‌ ದರೋಡೆ ನಡೆಯುತ್ತಿದೆ ಎಂದು ದೂರಿದರು.

Related posts

ಏರ್‌ಪೋರ್ಟ್‌ನಲ್ಲಿ ಸಾಮೂಹಿಕ ನಮಾಜ್ ವಿವಾದ: ಬೆಂಗಳೂರು ಘಟನೆ ದೇಶಾದ್ಯಂತ ಚರ್ಚೆ

ಏರ್‌ಪೋರ್ಟ್‌ನಲ್ಲಿ ಸಾಮೂಹಿಕ ನಮಾಜ್ ವಿವಾದ: ಬೆಂಗಳೂರು ಘಟನೆ ದೇಶಾದ್ಯಂತ ಚರ್ಚೆ

November 11, 2025
ಹಿರಿಯ ನಟ ಧರ್ಮೇಂದ್ರ ಅವರ ಆರೋಗ್ಯ ಮತ್ತೇ ಏರುಪೇರು – ಅಭಿಮಾನಿಗಳಲ್ಲಿ ಆತಂಕ

ಹಿರಿಯ ನಟ ಧರ್ಮೇಂದ್ರ ಅವರ ಆರೋಗ್ಯ ಮತ್ತೇ ಏರುಪೇರು – ಅಭಿಮಾನಿಗಳಲ್ಲಿ ಆತಂಕ

November 11, 2025

ರಾಜ್ಯದಲ್ಲಿ ಸುಮಾರು 24-25 ಜನರು ಮೈಕ್ರೋ ಫೈನಾನ್ಸ್‌ಗಳ ಕಿರುಕುಳ ತಾಳಲಾರದೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆದರೂ ಸರ್ಕಾರ ಸುಗ್ರೀವಾಜ್ಞೆ ಎನ್ನುತ್ತಿದೆಯೇ ಹೊರತು, ಒಂದೇ ಒಂದು ಮೈಕ್ರೋ ಫೈನಾನ್ಸ್‌ನ ವಿರುದ್ಧ ಕ್ರಮ ಕೈಗೊಂಡಿಲ್ಲ. ಸಿಎಂ ಸಿದ್ದರಾಮಯ್ಯ ಎಷ್ಟು ಗುಡುಗಿದರೂ ಮೈಕ್ರೋ ಫೈನಾನ್ಸ್‌ಗಳು ಕ್ಯಾರೇ ಎಂದಿಲ್ಲ. ಕುಂಭಮೇಳದಲ್ಲಿ ಜನರು ಸತ್ತಿದ್ದಕ್ಕೆ ಕಾಂಗ್ರೆಸ್‌ ನಾಯಕರು ಬಾಯಿ ಬಡಿದುಕೊಂಡರು. ಆದರೆ ಸಾಲ ವಸೂಲಿಗಾರರ ಕಿರುಕುಳದಿಂದ ಸತ್ತವರ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಮಾತನಾಡಿಲ್ಲ ಎಂದರು.

ನಿಗಮಗಳಿಗೆ ಹಣವಿಲ್ಲ

ಅಭಿವೃದ್ಧಿ ನಿಗಮಗಳಿಗೆ ಹೆಚ್ಚು ಅನುದಾನ ನೀಡಿ ಸಾಲ ಕೊಟ್ಟಿದ್ದರೆ, ಜನರು ಮೈಕ್ರೋ ಫೈನಾನ್ಸ್‌ ಮೊರೆ ಹೋಗುತ್ತಿರಲಿಲ್ಲ. ಡಾ.ಬಿ.ಆರ್.ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ಗಂಗಾ ಕಲ್ಯಾಣ ಯೋಜನೆಗೆ 2022-23 ರಲ್ಲಿ ಬಿಜೆಪಿ ಸರ್ಕಾರ 60 ಕೋಟಿ ರೂ. ಅನುದಾನ ನೀಡಿತ್ತು. 2024-25 ರಲ್ಲಿ ಕಾಂಗ್ರೆಸ್‌ 40 ಕೋಟಿ ರೂ. ನೀಡಿದೆ. ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ಸ್ವಯಂ ಉದ್ಯೋಗ ಯೋಜನೆಗೆ ಬಿಜೆಪಿ 100 ಕೋಟಿ ರೂ. ನೀಡಿದರೆ, ಕಾಂಗ್ರೆಸ್‌ 45 ಕೋಟಿ ರೂ. ನೀಡಿದೆ. ಆದಿ ಜಾಂಬವ ಅಭಿವೃದ್ಧಿ ನಿಗಮಕ್ಕೆ ಬಿಜೆಪಿ 100 ಕೋಟಿ ರೂ. ನೀಡಿದರೆ, ಕಾಂಗ್ರೆಸ್‌ 50 ಕೋಟಿ ರೂ. ನೀಡಿದೆ. ಕೇಂದ್ರ ಆರ್ಥಿಕ ಸಚಿವೆ ನಿರ್ಮಲಾ ಸೀತಾರಾಮನ್‌ ಗ್ಯಾರಂಟಿ ಬಗ್ಗೆ ಹೇಳಿದ್ದಕ್ಕೆ ಬಾಯಿ ಬಡಿದುಕೊಂಡಿದ್ದಾರೆ. ಈ ಬಾರಿಯ ಬಜೆಟ್‌ನಲ್ಲಿ 1.5 ಲಕ್ಷ ಕೋಟಿ ರೂ. ಗೂ ಅಧಿಕ ಸಾಲವನ್ನು ಕಾಂಗ್ರೆಸ್‌ ಸರ್ಕಾರ ಮಾಡಲಿದೆ ಎಂದರು.

ತುರ್ತಾಗಿ ನಿಗಮಗಳಿಗೆ 5,000 ಕೋಟಿ ರೂ. ಅನುದಾನ ಬಿಡುಗಡೆ ಮಾಡಿ, ಜನರಿಗೆ ಸಾಲ ಕೊಟ್ಟರೆ ಅನುಕೂಲವಾಗುತ್ತದೆ. ಜೊತೆಗೆ ಇರುವ ಕಾನೂನನ್ನೇ ಬಳಸಿ ಮೈಕ್ರೋ ಫೈನಾನ್ಸ್‌ಗಳಿಗೆ ಕಡಿವಾಣ ಹಾಕಬೇಕು. ಪ್ರಧಾನಿ ನರೇಂದ್ರ ಮೋದಿಯವರು ಕಿಸಾನ್‌ ಸಮ್ಮಾನ್‌ ಸೇರಿದಂತೆ ಅನೇಕ ಯೋಜನೆಗಳನ್ನು ನೀಡಿದ್ದಾರೆ. ಅದೇ ರೀತಿ ಅಭಿವೃದ್ಧಿ ಕಾರ್ಯಗಳಿಗೆ ಹಣ ಬಳಸಬೇಕು. ಅಭಿವೃದ್ಧಿ ಕಾರ್ಯಕ್ಕೆ 80,000 ಕೋಟಿ ರೂ. ಸಿಗುತ್ತದೆ. ಅದರಲ್ಲಿ 55,000 ಕೋಟಿ ರೂ. ಅನ್ನು ಗ್ಯಾರಂಟಿಗಳಿಗೆ ಬಳಸಿದ್ದಾರೆ. ಇನ್ನುಳಿದ ಹಣದಲ್ಲಿ ಅಭಿವೃದ್ಧಿ ಹೇಗಾಗುತ್ತದೆ? ಶಾಸಕ ಬಿ.ಆರ್‌.ಪಾಟೀಲ್‌ ಇದನ್ನೇ ಪ್ರಶ್ನೆ ಮಾಡಿ ರಾಜೀನಾಮೆ ನೀಡಿದ್ದಾರೆ ಎಂದರು.

ShareTweetSendShare
Join us on:

Related Posts

ಏರ್‌ಪೋರ್ಟ್‌ನಲ್ಲಿ ಸಾಮೂಹಿಕ ನಮಾಜ್ ವಿವಾದ: ಬೆಂಗಳೂರು ಘಟನೆ ದೇಶಾದ್ಯಂತ ಚರ್ಚೆ

ಏರ್‌ಪೋರ್ಟ್‌ನಲ್ಲಿ ಸಾಮೂಹಿಕ ನಮಾಜ್ ವಿವಾದ: ಬೆಂಗಳೂರು ಘಟನೆ ದೇಶಾದ್ಯಂತ ಚರ್ಚೆ

by Shwetha
November 11, 2025
0

ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ನಲ್ಲಿ ನಡೆದ ಸಾಮೂಹಿಕ ನಮಾಜ್ ಈಗ ದೇಶವ್ಯಾಪಕವಾಗಿ ಚರ್ಚೆಯ ವಿಷಯವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ವಿಡಿಯೋಗಳು...

ಹಿರಿಯ ನಟ ಧರ್ಮೇಂದ್ರ ಅವರ ಆರೋಗ್ಯ ಮತ್ತೇ ಏರುಪೇರು – ಅಭಿಮಾನಿಗಳಲ್ಲಿ ಆತಂಕ

ಹಿರಿಯ ನಟ ಧರ್ಮೇಂದ್ರ ಅವರ ಆರೋಗ್ಯ ಮತ್ತೇ ಏರುಪೇರು – ಅಭಿಮಾನಿಗಳಲ್ಲಿ ಆತಂಕ

by Shwetha
November 11, 2025
0

ಹಿಂದಿ ಚಿತ್ರರಂಗದ ದಿಗ್ಗಜ ನಟ ಧರ್ಮೇಂದ್ರ (90) ಅವರ ಆರೋಗ್ಯದಲ್ಲಿ ಮತ್ತೊಮ್ಮೆ ಏರುಪೇರು ಕಂಡುಬಂದಿದ್ದು, ಅವರನ್ನು ತುರ್ತು ಆಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರು ವೆಂಟಿಲೇಟರ್‌ನಲ್ಲಿದ್ದು, ವೈದ್ಯರ...

ರಾಹುಲ್ ಗಾಂಧಿಗೆ ತರಬೇತಿ ಶಿಬಿರದಲ್ಲಿ ‘ಪುಷ್‌ಅಪ್’ ಪನಿಷ್ಮೆಂಟ್

ರಾಹುಲ್ ಗಾಂಧಿಗೆ ತರಬೇತಿ ಶಿಬಿರದಲ್ಲಿ ‘ಪುಷ್‌ಅಪ್’ ಪನಿಷ್ಮೆಂಟ್

by Shwetha
November 11, 2025
0

ಮಧ್ಯಪ್ರದೇಶದ ಪದ್ಮರ್ಹಿ ಗಿರಿಧಾಮದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ತರಬೇತಿ ಶಿಬಿರದಲ್ಲಿ ವಿಶೇಷ ಘಟನೆ ನಡೆದಿದೆ. ತರಬೇತಿಗೆ ನಿಗದಿತ ಸಮಯಕ್ಕಿಂತ ತಡವಾಗಿ ಬಂದಿದ್ದಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ 10...

ತಿರುಪತಿ ಲಡ್ಡು ಪ್ರಸಾದಕ್ಕೆ ರಾಸಾಯನಿಕ ತುಪ್ಪ: 5 ವರ್ಷಗಳಿಂದ ಭಕ್ತರ ನಂಬಿಕೆಗೆ ದ್ರೋಹ ಬಗೆದ ನಕಲಿ ಡೈರಿ ಜಾಲ ಬಯಲು

ತಿರುಪತಿ ಲಡ್ಡು ಪ್ರಸಾದಕ್ಕೆ ರಾಸಾಯನಿಕ ತುಪ್ಪ: 5 ವರ್ಷಗಳಿಂದ ಭಕ್ತರ ನಂಬಿಕೆಗೆ ದ್ರೋಹ ಬಗೆದ ನಕಲಿ ಡೈರಿ ಜಾಲ ಬಯಲು

by Shwetha
November 11, 2025
0

ತಿರುಪತಿಯ ಪವಿತ್ರ ಲಡ್ಡು ಪ್ರಸಾದದ ಶುದ್ಧತೆಗೆ ಕಳಂಕ ತರುವಂತಹ ಆಘಾತಕಾರಿ ಹಗರಣವೊಂದು ಸಿಬಿಐ ತನಿಖೆಯಿಂದ ಹೊರಬಿದ್ದಿದೆ. ಉತ್ತರಾಖಂಡ ಮೂಲದ ಡೈರಿಯೊಂದು ಒಂದೇ ಒಂದು ಹನಿ ಹಾಲು ಅಥವಾ...

ಖೈದಿಗಳಿಗೆ ಐಷಾರಾಮಿ ಭಾಗ್ಯ ಕೊಟ್ಟ ಸರ್ಕಾರ ಎಂದು ಬಿಜೆಪಿ ವ್ಯಂಗ್ಯ

ಖೈದಿಗಳಿಗೆ ಐಷಾರಾಮಿ ಭಾಗ್ಯ ಕೊಟ್ಟ ಸರ್ಕಾರ ಎಂದು ಬಿಜೆಪಿ ವ್ಯಂಗ್ಯ

by Shwetha
November 11, 2025
0

ಪರಪ್ಪನ ಅಗ್ರಹಾರ ಜೈಲಿನಲ್ಲಿ ನಡೆಯುತ್ತಿರುವ ಆಕ್ರಮಣಗಳ ಬಗ್ಗೆ ಬಿಜೆಪಿ ಮತ್ತೊಮ್ಮೆ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದೆ. ಜೈಲು ಶಿಸ್ತು, ನಿಯಮಗಳು ಎಲ್ಲವೂ ಕುಸಿದು, ಜೈಲು ಈಗ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram