ಬೆಳಗಾವಿ: ಮಕ್ಕಳು ಹೂ ಕಿತ್ತಿದ್ದಕ್ಕೆ ಪಾಪಿಯೊಬ್ಬ ಅಂಗನವಾಡಿ ಸಹಾಯಕಿಯ ಮೂಗನ್ನೇ ಕತ್ತರಿಸಿರುವ ಅಮಾನವೀಯ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕ್ಷೇತ್ರದಲ್ಲಿಯೇ ಈ ಅಮಾನವೀಯ ಘಟನೆ ನಡೆದಿದೆ. ಸುಗಂಧಾ ಮೋರೆ ಸಂತ್ರಸ್ತ ಮಹಿಳೆ. ಕಲ್ಯಾಣಿ ಮೋರೆ ಹಲ್ಲೆ ನಡೆಸಿದ ಆರೋಪಿ ಎನ್ನಲಾಗದೆ. ಹಲ್ಲೆಗೊಳಗಾದ ಮಹಿಳೆ, ಬಾಸುರ್ತಿ ಗ್ರಾಮದ ಅಂಗನವಾಡಿಯಲ್ಲಿ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ ಮೂರು ದಿನದ ಹಿಂದೆ ಇವರ ಮೇಲೆ ಹಲ್ಲೆ ನಡೆಸಲಾಗಿದೆ. ಗಾರ್ಡನ್‌ನಲ್ಲಿರುವ ಹೂ ಕಿತ್ತಿದ್ದಕ್ಕೆ, ಅಂಗನವಾಡಿ ಸಹಾಯಕಿ ಸುಗಂಧಾ ಮೇಲೆ ಹಲ್ಲೆ ನಡೆಸಲಾಗಿದೆ. ಗಾರ್ಡನ್‌ನ ಮಾಲೀಕ ಕಲ್ಯಾಣಿ ಮೋರೆ ಎಂಬಾತ ಹಲ್ಲೆ ಮಾಡಿದ್ದಾನೆ ಎನ್ನಲಾಗಿದೆ.
ಸದ್ಯ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.







