ಕಲಬುರಗಿ : ಪಾಪಿಯೊಬ್ಬ ಅಪ್ರಾಪ್ತ ಬಾಲಕಿ(12 Years Old Girl)ಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿ ಬಾವಿಯಲ್ಲಿ ಎಸೆದಿರುವ ಶಂಕೆಯೊಂದು ವ್ಯಕ್ತವಾಗಿರುವ ಘಟನೆ ನಡೆದಿದೆ.
ಕಲಬುರಗಿ(Kalaburagi) ಜಿಲ್ಲೆಯ ಆಳಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಈ ಘಟನೆ ಇಂದು ಬೆಳಕಿಗೆ ಬಂದಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ. ಅಪ್ರಾಪ್ತ ಬಾಲಕಿಯೂ ತನ್ನ ಮನೆಯಿಂದ ಆಚೆ ಬಂದು, ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿ ಹೊರಟಿದ್ದಳು. ಆದ್ರೆ ಎರಡು ಮೂರು ದಿನ ಕಳೆದರೂ ಬಾಲಕಿ ಸಿಕ್ಕಿಲ್ಲ. ಹೀಗಾಗಿ ಮನೆಯವರೆಲ್ಲ ಹುಡುಕಾಟ ನಡೆಸಿದ್ದರು. ಆದರೆ, ಗ್ರಾಮದ ಹೊರವಲಯದ ಬಾವಿಯಲ್ಲಿ ಬಾಲಕಿ ಶವವಾಗಿ ಪತ್ತೆಯಾಗಿದೆ.
ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿ ಬಾವಿಯಲ್ಲಿ ಎಸೆದಿರುವ ಶಂಕೆ ವ್ಯಕ್ತವಾಗಿದೆ. ಆದರೆ, ಆರೋಪಿಯ ಗುರುತು ಪತ್ತೆಯಾಗಿಲ್ಲ. ಪೊಲೀಸರು ವೈದ್ಯಕೀಯ ವರದಿಗಾಗಿ ಕಾಯುತ್ತಿದ್ದಾರೆ. ಸದ್ಯ ಆಳಂದ ಪೊಲೀಸ್ ಠಾಣೆಯಲ್ಲಿ ಪೋಸ್ಕೋ ಪ್ರಕರಣ ದಾಖಲಾಗಿದ್ದು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.