The Sirsi Urban Cooperative Bank Recruitment 2025 : ದಿ ಶಿರಸಿ ಅರ್ಬನ್ ಸಹಕಾರಿ ಬ್ಯಾಂಕ್ ನಿಯಮಿತದಲ್ಲಿ ಇದರಲ್ಲಿ ಖಾಲಿಯಿರುವ ಫ್ರಂಟ್ ಡೆಸ್ಕ್ ಅಸೋಸಿಯೇಟ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹುದ್ದೆ : ಫ್ರಂಟ್ ಡೆಸ್ಕ್ ಅಸೋಸಿಯೇಟ್
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳು ಶಿರಸಿ, ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : 50
ಶೈಕ್ಷಣಿಕ ಅರ್ಹತೆ : ಯಾವುದೇ ಅಂಗೀಕೃತ ವಿಶ್ವವಿದ್ಯಾಲಯದಿಂದ ಬಿ.ಕಾಂ/ ಬಿ.ಬಿ.ಎ/ ಬಿ.ಬಿ.ಎಂ/ ಬಿ.ಇ/ ಬಿ.ಎಸ್ಸಿ/ಬಿ.ಎ ಪದವಿಯನ್ನು ಹೊಂದಿರಬೇಕು. ( ವಿದ್ಯಾರ್ಹತೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಅಧಿಸೂಚನೆಯಲ್ಲಿ ನೀಡಲಾಗಿದೆ.)
ವಯೋಮಾನ : ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಪೂರೈಸಿರಬೇಕು.
• ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಪ.ಜಾತಿ, ಪ.ಪಂಗಡ, ಪ್ರ1ರ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 21,400 ರಿಂದ ರೂ. 42,000 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ : ಈ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಮೌಖಿಕ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವ ವಿಳಾಸ : ಮುಖ್ಯ ಕಾರ್ಯನಿರ್ವಹಣಾಧಿಕಾರಿ, ದಿ ಶಿರಸಿ ಅರ್ಬನ್ ಸಹಕಾರಿ ಬ್ಯಾಂಕ್ ಲಿಮಿಟೆಡ್, ಕೇಂದ್ರ ಕಛೇರಿ, ರಾಯರಪೇಟೆ, ಶಿರಸಿ – 581 401 (ಉ.ಕ)
ನಿಗದಿತ ಅರ್ಜಿ ಶುಲ್ಕದ ವಿವರ : ರೂ. 1000 ಅರ್ಜಿ ಶುಲ್ಕವನ್ನು “ಮುಖ್ಯ ಕಾರ್ಯನಿರ್ವಹಣಾಧಿಕಾರಿ, ದಿ ಶಿರಸಿ ಅರ್ಬನ್ ಸಹಕಾರಿ ಬ್ಯಾಂಕ್ ಲಿಮಿಟೆಡ್” ಹೆಸರಿಗೆ ಡಿಮಾಂಡ್ ಡ್ರಾಪ್ಟ್ ಮೂಲಕ ಪಾವತಿಸಿ ಅರ್ಜಿಯೊಂದಿಗೆ ಸಲ್ಲಿಸತಕ್ಕದ್ದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮಾರ್ಚ್ 18, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಏಪ್ರಿಲ್ 08, 2025