ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ವಿರುದ್ಧ ಕೇಳಿ ಬಂದಿರುವ ಲೈಂಗಿಕ ದೌರ್ಜನ್ಯದ ಅಶ್ಲೀಲ ವಿಡಿಯೋ ಪ್ರಕರಣ ಸಾಕಷ್ಟು ಸದ್ದು ಮಾಡುತ್ತಿದೆ. ಈ ಕುರಿತು ತನಿಖೆ ಕೈಗೊಂಡಿರುವ ಎಸ್ ಐಟಿ ತಂಡ ಸಂತ್ರಸ್ತೆಯರ ನೆರವಿಗಾಗಿ ಸಹಾಯವಾಣಿ ತೆರೆದಿದೆ.
ಯಾರೇ ಸಂತ್ರಸ್ತರಿಗೆ ಕಾನೂನು ನೆರವು, ರಕ್ಷಣೆ ಹಾಗೂ ಇನ್ನಿತರ ಯಾವುದೇ ಸಹಾಯ ಬೇಕಾಗಿದ್ದಲ್ಲಿ ಸಹಾಯವಾಣಿ ಸಂಖ್ಯೆ 6360938947 ಕರೆ ಮಾಡುವಂತೆ ಎಸ್ಐಟಿ ಪತ್ರಿಕಾ ಪ್ರಕಟಣೆ ಹೊರಡಿಸಿ ತಿಳಿಸಿದೆ. ಈ ಘಟನೆಗೆ ಸಂಬಂಧಿಸಿದಂತೆ ಇನ್ನಷ್ಟು ಸಂತ್ರಸ್ತರು ಇರುವುದು ತಿಳಿದು ಬಂದಿದ್ದು, ಸಂತ್ರಸ್ತರು ಹಾಗೂ ಬಾತ್ಮೀದಾರರಿಗೆ (ಮಾಹಿತಿದಾರರಿಗೆ) ಕಾನೂನು ನೆರವು ಹಾಗೂ ರಕ್ಷಣೆ ನೀಡಲು ಸಹಾಯವಾಣಿ ತೆರೆಯಲಾಗಿದ್ದು.6360938947 ಸಹಾಯವಾಣಿ ಸಂಖ್ಯೆ ಸಂಪರ್ಕಿಸಬಹುದು. ಸಂತ್ರಸ್ತರು ಅಥವಾ ಬಾತ್ಮೀದಾರರ ಹೆಸರುಗಳನ್ನು ಗೌಪ್ಯವಾಗಿಡಲಾಗುವುದು ಎಂದು ವಿಶೇಷ ತನಿಖಾ ತಂಡ ಪ್ರಕಟಣೆಯಲ್ಲಿ ಸೂಚಿಸಿದೆ.
ಈಗಾಗಲೇ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಈ ನಡುವೆ ವಿಡಿಯೊದಲ್ಲಿ ಸಾಕಷ್ಟು ಮಹಿಳಾ ಅಧಿಕಾರಿಗಳೂ ಇದ್ದಾರೆ ಎಂಬ ಬಗ್ಗೆ ಹೇಳಲಾಗಿತ್ತು. ಈ ಹಿನ್ನೆಲೆಯಲ್ಲಿ ವಿಡಿಯೊಗಳಲ್ಲಿ ಕಂಡ ಮುಖವನ್ನಾಧರಿಸಿ ಅವರ ಗುರುತು ಪತ್ತೆ ಹಚ್ಚುವ ಕಾರ್ಯ ಕೂಡ ನಡೆಯುತ್ತಿದೆ.
ಈಗಾಗಲೇ ರೇವಣ್ಣ ಅವರನ್ನು ನ್ಯಾಯಾಧೀಶರ ಎದುರು ಹಾಜರು ಪಡಿಸಲಾಗಿದೆ. ನ್ಯಾಯಾಧೀಶರು ನಾಲ್ಕು ದಿನಗಳ ಕಾಲ ಎಸ್ ಇಟಿ ವಿಚಾರಣೆಗೆ ನೀಡಿದ್ದಾರೆ. ಇದಕ್ಕೂ ಮುನ್ನ ಸಂತ್ರಸ್ತೆ ಮಹಿಳೆಯಿಂದ ಮಾಹಿತಿ ಮತ್ತು ಹೇಳಿಕೆ ಪಡೆಯಲಾಗಿದೆ. ಒಂದು ವೇಳೆ ಮಹಿಳೆ ಕಿಡ್ನಾ ಮಾಡಿ ತನಗೆ ಬೆದರಿಕೆ ಹಾಕಿದ್ದರು. ತನ್ನ ಮೇಲೆ ಅತ್ಯಾಚಾರ ಆಗಿದೆ ಈ ವಿಚಾರ ಹೊರ ಬಾರದಂತೆ ತಡೆದರು ಎಂದು ಹೇಳಿಕೆ ನೀಡಿದರೆ, ರೇವಣ್ಣ ಕುಟುಂಬಕ್ಕೆ ಸಂಕಷ್ಟ ತಪ್ಪಿದ್ದಲ್ಲ.