ಕೊರೊನಾ ಲಸಿಕೆಗಾಗಿ ಭಿಕ್ಷೆ ಬೇಡುವ ಪರಿಸ್ಥಿತಿ corona vaccine
ಹಾಸನ : ರಾಜ್ಯದಲ್ಲಿ ಕೊರೊನಾ ಲಸಿಕೆಯ ಕೊರತೆ ಇದ್ದು, ಎಲ್ಲೆಡೆ ನೋ ಸ್ಟಾಕ್ ಬೋರ್ಡ್ ಗಳೇ ಕಾಣುತ್ತಿದೆ. ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡುವುದಾಗಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಈಗಾಗಲೇ ತಿಳಿಸಿದ್ದಾರೆ.
ಈ ಮಧ್ಯೆ ಲಸಿಕೆ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಶ್ರವಣಬೆಳಗೊಳ ಕ್ಷೇತ್ರದ ಶಾಸಕ ಸಿ.ಎನ್.ಬಾಲಕೃಷ್ಣ ಅಸಮಾಧಾನ ಹೊರಹಾಕಿದ್ದಾರೆ.
ಜಿಲ್ಲೆಯ ಚನ್ನರಾಯಪಟ್ಟಣದ ಪ್ರಥಮ ದರ್ಜೆ ಕಾಲೇಜಿನಲ್ಲಿ ವ್ಯಾಕ್ಸಿನೇಷನ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೊರೊನಾ ಲಸಿಕೆಗಾಗಿ ಭಿಕ್ಷೆ ಬೇಡುವ ಪರಿಸ್ಥಿತಿ ಎದುರಾಗಿದೆ. ನಮ್ಮ ತಾಲೂಕಿಗೆ ಎಪ್ಪತ್ತು ಸಾವಿರ ಡೋಸ್ ವ್ಯಾಕ್ಸಿನ್ ಬಂದಿದೆ. ಇನ್ನೂ ಹೆಚ್ಚಿನ ಲಸಿಕೆಯ ಅಗತ್ಯವಿದೆ ಎಂದು ಹೇಳಿದರು.
ಈ ಕುರಿತು ಮನವಿ ಮಾಡಿದರೂ ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರ ನೀಡುತ್ತಿಲ್ಲ. ತಾಲೂಕಿಗೆ ಲಸಿಕೆಗೋಸ್ಕರ ಭಿಕ್ಷೆ ಬೇಡುವಂತಹ ಸಂದರ್ಭ ಉಂಟಾಗಿದೆ. ತಾಲೂಕಿನ ಜನತೆಗೆ ಏನು ಹೇಳಬೇಕು ಎಂಬುದು ನಮಗೆ ತಿಳಿಯುತ್ತಿಲ್ಲ ಎಂದು ಅಸಹಾಯಕತೆ ಹೊರಹಾಕಿದ್ದಾರೆ.