ಮದ್ಯ ಖರೀದಿಸುವುದಕ್ಕಾಗಿ ಹಣ ನೀಡಿಲ್ಲ ಎಂದು ಪಾಪಿ ಮಗನೊಬ್ಬ ತನ್ನ ತಾಯಿಯನ್ನೇ ಕೊಲೆ ಮಾಡಿರುವ ಘಟನೆಯೊಂದು ನಡೆದಿದೆ.
ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 23 ವರ್ಷದ ಯುವಕನನ್ನು ಬಂಧಿಸಿದ್ದಾರೆ ಎನ್ನಲಾಗಿದೆ. ಮಹಾರಾಷ್ಟ್ರದ ಲಾತೂರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.
ಜ್ಞಾನೇಶ್ವರ ನಾಥರಾವ್ ಮುಂಡೆ ಎಂಬ ಪಾಪಿಯೇ ತನ್ನ ತಾಯಿ ಸಂಗೀತಾ ನಾಥರಾವ್ ಮುಂಡೆ (40) ಅವರನ್ನು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಕೊಲೆ ಮಾಡಿ ನಂತರ ಮನೆಗೆ ಬೀಗ ಹಾಕಿ ಪರಾರಿಯಾಗಿದ್ದಾನೆ. ಸದ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು, ತನಿಖೆ ಕೈಗೊಂಡಿದ್ದಾರೆ.