ಬಾಗಲಕೋಟೆ: ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಮಗನೇ ತಂದೆಯ ಕೊಲೆಗೆ ಸುಪಾರಿ ಕೊಟ್ಟಿರುವ ಘಟನೆಯೊಂದು ನಡೆದಿದೆ.
ಬಾಗಲಕೋಟೆಯಲ್ಲಿ ಈ ಘಟನೆ ನಡೆದಿದ್ದು, ಅಂಗವಿಕಲ ಮಗನೊಬ್ಬ ಮೂರು ಲಕ್ಷ ಸುಪಾರಿ ಕೊಟ್ಟ ತಂದೆಯನ್ನು ಕೊಲೆ ಮಾಡಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಚೆನ್ನಪ್ಪ (66) ಕೊಲೆಯಾದ ದುರ್ದೈವಿ ತಂದೆ. ವಿಕಲಚೇತನನಾಗಿರುವ ಮಗ ಚೆನ್ನಬಸಪ್ಪ ವಿಜಯಪುರ (Vijayapur) ಜಿಲ್ಲೆ ನಿಡಗುಂದಿ ಮೂಲದ ಮಾಂತೇಶ್‍ಗೆ ಸುಪಾರಿ ನೀಡಿ ಕೊಲೆ ಮಾಡಿಸಿದ್ದಾನೆ.
32 ಎಕರೆ ಆಸ್ತಿಯಲ್ಲಿ ವಿಭಾಗ ಮಾಡುವ ವಿಚಾರಕ್ಕೆ ತಂದೆ ಹಾಗೂ ಮಗನ ಮಧ್ಯೆ ಆಗಾಗ ಜಗಳ ನಡೆಯುತ್ತಿತ್ತು. ಇದರಿಂದ ಕೋಪಗೊಂಡ ಮಗ ಚನ್ನಬಸಪ್ಪ, ಸೊಸೆ ಶಿವಬಸವ್ವ ಹಾಗೂ ಮಗನ ಆಪ್ತ ರಮೇಶ್ ಮನಗೂಳಿ ಸೇರಿ ಸುಪಾರಿ ಕೊಟ್ಟು ಕೊಲೆ ಮಾಡಿಸಿದ್ದಾರೆ ಎನ್ನಲಾಗಿದೆ.
ಸುಪಾರಿ ಪಡೆದ ಮಾಂತೇಶ್ ರಾಂಪುರ ಗ್ರಾಮದ ಹತ್ತಿರ ಕೊಲೆ ಮಾಡಿದ್ದಾನೆ. ಸದ್ಯ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಿದ್ದು, ತನಿಖೆ ಕೈಗೊಂಡಿದ್ದಾರೆ.