ಬೆಂಗಳೂರು: ಚಿನ್ನಸ್ವಾಮಿ ಕಾಲ್ತುಳಿತ (Chinnaswamy Stampede) ಪ್ರಕರಣಕ್ಕೂ ಸರ್ಕಾರಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ (HK Patil) ಹೇಳಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಹೇಳಿರುವುದು ಸರಿಯಾಗಿಯೇ ಇದೆ. ಚಿನ್ನಸ್ವಾಮಿ ಮೈದಾನದಲ್ಲಿ ನಡೆದ ಕಾರ್ಯಕ್ರಮಕ್ಕೂ ಹಾಗೂ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ. ಈ ಪ್ರಕರಣವನ್ನು ನಾವು ಗಂಭೀರವಾಗಿ ಪರಿಗಣಿಸಿದ್ದು, ತನಿಖೆ ನಡೆಸುತ್ತಿದ್ದೇವೆ.
ಈಗಾಗಲೇ ಈ ಕುರಿತು ತನಿಖೆ ನಡೆಯುತ್ತಿದೆ. ಹೀಗಾಗಿ ಮಾತನಾಡುವುದು ಸರಿಯಲ್ಲ. ಘಟನೆ ಆದ ಕೂಡಲೇ ಸಿಎಂ, ಡಿಸಿಎಂ ಆಸ್ಪತ್ರೆ ಮತ್ತು ಘಟನಾ ಸ್ಥಳಕ್ಕೆ ಹೋಗಿದ್ದರು. ಸರ್ಕಾರ ಸೂಕ್ತವಾಗಿ ಸ್ಪಂದಿಸಿದೆ ಎಂದಿದ್ದಾರೆ.