ವಾರಾಂತ್ಯ ಕರ್ಫ್ಯೂ ತೆರವುಗೊಳಿಸಿದ ರಾಜ್ಯ ಸರ್ಕಾರ weekend curfew saaksha tv
ಬೆಂಗಳೂರು : ರಾಜ್ಯ ಸರ್ಕಾರ ದಕ್ಷಿಣ ಕನ್ನಡ, ಉಡುಪಿ, ಹಾಸನ ಜಿಲ್ಲೆಯಲ್ಲಿದ್ದ ವಾರಾಂತ್ಯ ಕಫ್ರ್ಯೂವನ್ನು ತೆರವುಗೊಳಿಸಿ ಆದೇಶ ಹೊರಡಿಸಿದೆ.
ಕೊರೊನಾ ಸೋಂಕಿನ ಪಾಸಿಟಿವಿಟಿ ದರ ಶೇಕಾಡ 2 ಕ್ಕಿಂತ ಜಾಸ್ತಿ ಇದ್ದ ಕಾರಣ ಈ ಜಿಲ್ಲೆಗಳಲ್ಲಿ ವಾರಾಂತ್ಯ ಕರ್ಫ್ಯೂ ಜಾರಿ ಮಾಡಲಾಗಿತ್ತು.
ಆದ್ರೆ ಇದೀಗ ಕೊರೊನಾ ಸೋಂಕಿನ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಹಾಸನ ಜಿಲ್ಲೆಯಲ್ಲಿ ಜಾರಿಯಲ್ಲಿದ್ದ ವಾರಾಂತ್ಯದ ಕಫ್ರ್ಯೂ ತೆರವುಗೊಳಿಸಲಾಗಿದೆ.
ಅಲ್ಲದೆ ಒಂದು ವೇಳೆ ಜಿಲ್ಲೆಯಲ್ಲಿ ಮತ್ತೆ ಕೋವಿಡ್ ಸೋಂಕಿನ ಪ್ರಕರಣ ಹೆಚ್ಚಾದರೆ ಪುನಃ ಕಫ್ರ್ಯೂ ಜಾರಿಗೊಳಿಸಲು ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ.
ಇನ್ನೊಂದೆಡೆ ನೆರೆಯ ಕೇರಳದಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯಲ್ಲಿ ವಾರದ ಎಲ್ಲ ದಿನ ರಾತ್ರಿ 9ರಿಂದ ಬೆಳಗ್ಗೆ 5ರ ವರೆಗೆ ನೈಟ್ ಕಫ್ರ್ಯೂ ಜಾರಿ ಮಾಡಲಾಗಿದೆ.