ರಾಜ್ಯ ಸರ್ಕಾರಕ್ಕೆ ಅನುಭವದ ಕೊರತೆಯಿದೆ : ದೇಶಪಾಂಡೆ Corona
ಕಾರವಾರ : ರಾಜ್ಯ ಸರ್ಕಾರ ಕೊರೊನಾ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ.
ಈ ಸರ್ಕಾರಕ್ಕೆ ಅನುಭವದ ಕೊರತೆ ಇದೆ ಎಂದು ಮಾಜಿ ಸಚಿವ ಆರ್.ವಿ.ದೇಶಪಾಂಡೆ, ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆ ಕಾರವಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ ಅವರು, ರಾಜ್ಯ ಸರ್ಕಾರ ವ್ಯವಸ್ಥಿತವಾಗಿ ಪ್ಯಾಕೇಜ್ ಘೋಷಣೆ ಮಾಡಿಲ್ಲ.
ಕಳೆದ ವರ್ಷದ ಪ್ಯಾಕೇಜ್ ಇನ್ನೂ ಸರಿಯಾಗಿ ತಲುಪಿಲ್ಲ. ಕರಾವಳಿ ಭಾಗದ ಮೀನುಗಾರರ ಸಂಪೂರ್ಣ ನಿರ್ಲಕ್ಷಿಸಿದೆ ಎಂದು ಕಿಡಿಕಾರಿದರು.
ಇನ್ನು ಸರ್ಕಾರ ಪ್ರತಿ ಹಂತದಲ್ಲೂ ವಿಪಕ್ಷಗಳನ್ನ ನಿರ್ಲಕ್ಷಿಸುತ್ತಿದೆ, ವಿರೋಧ ಪಕ್ಷದವರನ್ನು ಸರ್ಕಾರ ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ.
ಇಂತಹ ಸರ್ಕಾರವನ್ನು ನನ್ನ ರಾಜಕೀಯ ಜೀವನದಲ್ಲಿ ನೋಡಿಲ್ಲ ಎಂದು ಗುಡುಗಿದರು.