15,000 ಶಿಕ್ಷಕರ ನೇಮಕಾತಿಗೆ ಮುಂದಾದ ರಾಜ್ಯ ಸರ್ಕಾರ….
ರಾಜ್ಯದ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು ಒಟ್ಟು 15 ಸಾವಿರ ಶಿಕ್ಷರ ನೇಮಕಾತಿ ಮಾಡಿಕೊಳ್ಳಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಬಗ್ಗೆ ಶೀಘ್ರವೇ ಅಧಿಸೂಚನೆ ಹೊರಡಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಟ್ವೀಟ್ ಮಾಡಿ ತಿಳಿಸಿದ್ದಾರೆ.
2021 -22 ರ ಶೈಕ್ಷಣಿಕ ವರ್ಷದಲ್ಲಿ ಒಟ್ಟು 15000 ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲು ಸರ್ಕಾರ ತೀರ್ಮಾನಿಸಿದೆ. ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ವೃಂದದ ಪದವೀಧರರ ಪ್ರಾಥಮಿಕ ಶಾಲಾ (6 ರಿಂದ 8) ತರಗತಿಯ 10000 ಶಿಕ್ಷಕರನ್ನ ನೇಮಕಾತಿ ಮಾಡಿಕೊಳ್ಳಲಾಗುವುದು. ಕಲ್ಯಾಣ ಕರ್ನಾಟಕ ಭಾಗದ 5000 ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಬಿ ಸಿ ನಾಗೇಶ್ ಟ್ವೀಟ ಮಾಡುವ ಮೂಲಕ ತಿಳಿಸಿದ್ದಾರೆ.
ಶಿಕ್ಷಕರ ಕೊರತೆ ನೀಗಿಸಿ ಶಿಕ್ಷಣದ ಗುಣಮಟ್ಟ ಕಾಪಾಡಲು ಈಗಾಗಲೆ 23000 ಸಾವಿರ ಅತಿಥಿ ಶಿಕ್ಷಕರ ಸೇವೆ ಪಡೆಯಲಾಗುತ್ತಿದ್ದ ಹೆಚ್ಚುವರಿಯಾಗಿ 4 ಸಾವಿರ ಅತಿಥಿ ಶಿಕ್ಷಕರ ಸೇವೆ ಪಡೆಯಲು ಸರ್ಕಾರ ನಿರ್ಧರಿಸಿದೆ.








