ರಾಜ್ಯ ಸರ್ಕಾರ ಭ್ರಷ್ಟಾಚಾರದಿಂದ ತುಂಬಿ ಹೋಗಿದೆ : ಸಿದ್ದರಾಮಯ್ಯ Siddaramaiah saaksha tv
ಬೆಳಗಾವಿ : ರಾಜ್ಯ ಸರ್ಕಾರ ಭ್ರಷ್ಟಾಚಾರದಿಂದ ತುಂಬಿ ಹೋಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರ ಆಕ್ರೋಶ ಹೊರಹಾಕಿದ್ದಾರೆ.
ಸರ್ಕಾರದ ವೈಫಲ್ಯಗಳ ಬಗ್ಗೆ ಗಮನ ಸೆಳೆಯಲು ಕಾಂಗ್ರೆಸ್ ನಾಯಕರು ಇಂದು ಬೆಳಗಾವಿ ನಗರದಲ್ಲಿ ಟ್ರ್ಯಾಕ್ಟರ್ ರ‍್ಯಾಲಿ ಹಮ್ಮಿಕೊಂಡಿದ್ದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ರಾಜ್ಯ ಬಿಜೆಪಿ ಸರ್ಕಾರ ಭ್ರಷ್ಟಾಚಾರದಿಂದ ತುಂಬಿ ಹೋಗಿದೆ.
ಶೇ.40 ರಷ್ಟು ಪರ್ಸೆಂಟೇಜ್ ಕಾಮಗಾರಿಗೆ ಕೊಡಬೇಕು ಅಂತ ಗುತ್ತಿಗೆದಾರರು ಪತ್ರ ಬರೆದು ಆರೋಪ ಮಾಡಿದ್ದಾರೆ. ಈ ಬಗ್ಗೆ ನ್ಯಾಯಾಂಗ ತನಿಖೆ ಅಥವಾ ಸದನ ಸಮಿತಿ ತನಿಖೆ ಮಾಡಬೇಕು. ನಮ್ಮ ಸರ್ಕಾರ ಇದ್ದಾಗ 10 ಪರ್ಸಂಟ್ ಅಂತಿದ್ರು. ಅದನ್ನೂ ಸೇರಿಸಿ ಪ್ರಧಾನಿ ಮೋದಿ ಅವರು ತನಿಖೆ ಮಾಡಲಿ ಎಂದು ಸಿದ್ದರಾಮಯ್ಯ ಸವಾಲ್ ಹಾಕಿದರು.
ಇನ್ನು ರಾಜ್ಯದಲ್ಲಿ ಎಲ್ಲ ಅಭಿವೃದ್ಧಿ ಕೆಲಸಗಳು ನಿಂತಿವೆ. ಕೇಂದ್ರದಿಂದ ಪರಿಹಾರ ಬಂದಿಲ್ಲ, ಸತ್ತವರಿಗೆ, ಮನೆ ಕಳೆದುಕೊಂಡವರಿಗೆ ಪರಿಹಾರ ನೀಡಿಲ್ಲ. 23 ಜಿಲ್ಲೆಯಲ್ಲಿ ನೆರೆ ಬಂದಿದೆ. ಬೆಳೆ ಪರಿಹಾರ ಇನ್ನೂ ನೀಡಿಲ್ಲ ಎಂದು ಆಕ್ರೋಶ ಹೊರಹಾಕಿದರು.