ಬೆಂಗಳೂರು : ರಾಜ್ಯದಲ್ಲಿ ಕೊರೊನಾಸುರನ ಆರ್ಭಟ ಹೆಚ್ಚಾಗುತ್ತಿದೆ. ಇದರಿಂದಾಗಿ ಜನರು ಹೆಚ್ಚು ಆತಂಕಗೊಂಡಿದ್ದಾರೆ. ಕೊರೊನಾ ನಿಯಂತ್ರಣ ಮಾಡಲು ರಾಜ್ಯ ಸರ್ಕಾರ ಹರಸಾಹಸ ಪಡುತ್ತಿದೆ. ಆದರೆ ಕೇರಳ ಕೊರೊನಾ ನಿಯಂತ್ರಣ ಮಾಡುವಲ್ಲಿ ಮುಂದಡಿ ಇಟ್ಟಿದೆ. ಈ ಹಿನ್ನೆಲೆಯಲ್ಲಿ ಕೇರಳ ಸರ್ಕಾರ ತೆಗೆದುಕೊಂಡಿರುವ ಕ್ರಮಗಳನ್ನು ರಾಜ್ಯದಲ್ಲಿ ಅನುಸರಿಸುವ ಪ್ಲ್ಯಾನ್ ನಡೆಯುತ್ತಿದೆ. ಹಾಗಾಗಿ ಎರಡನೇ ಬಾರಿಗೆ ಕೇರಳ ಸರ್ಕಾರದ ಜೊತೆ ಮಾತುಕತೆ ನಡೆಸಲು ಸರ್ಕಾರ ಮುಂದಾಗಿದೆ.
ಕೇರಳ ಸರ್ಕಾರದ ಜೊತೆ ಎರಡನೇ ಬಾರಿಗೆ ಮಾತುಕತೆ ನಡೆಸಲು ಸಿದ್ದತೆ ನಡೆದಿದೆ. ಮೊದಲ ಬಾರಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಕೇರಳ ಸರ್ಕಾರದ ಜೊತೆ ಮಾತುಕತೆ ನಡೆಸಿದ್ದರು. ಆದರೆ ಪ್ರಸ್ತುತ ಸಚಿವರ ಕುಟಂಬದವರಿಗೆ ಸೋಂಕು ಕಾಣಿಸಿಕೊಂಡಿದೆ. ಹಾಗಾಗಿ ಸಚಿವರು ಹೋ ಕ್ವಾರಂಟೈನ್ ನಲ್ಲಿದ್ದಾರೆ.
ಹಾಗಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಈ ಬಾರಿ ಕೇರಳ ಸರ್ಕಾರದ ಜೊತೆಗೆ ಮಾತುಕತೆ ನಡೆಸುವ ಜವಬ್ದಾರಿಯನ್ನು ಸರ್ಕಾರ ಮುಖ್ಯಕಾರ್ಯದರ್ಶಿ ಟಿ.ಎಂ ವಿಜಯಭಾಸ್ಕರ್ ಅವರಿಗೆ ನೀಡಿದ್ದಾರೆ ಎನ್ನಲಾಗಿದೆ.
ಲಾಕ್ ಡೌನ್ ತೆರವುಗೊಂಡ ಬಳಿಕ ಕೇರಳಕ್ಕೆ ಸಾಕಷ್ಟು ಜನ ಬಂದಿದ್ದಾರೆ. ಆದರೂ ಕೇರಳದಲ್ಲಿ ಕೊರೊನಾ ನಿಯಂತ್ರಣದಲ್ಲಿದೆ. ಹಾಗಾಗಿ ಕೇರಳ ಸರ್ಕಾರ ತೆಗೆದುಕೊಂಡಿರು ಕ್ರಮಗಳ ಬಗ್ಗೆ ತಿಳಿದು ಅದೆ ಮಾದರಿಯ ಕ್ರಮಗಳನ್ನು ತೆಗೆದುಕೊಳ್ಳುವ ಸಾಧ್ಯತೆಯಿದೆ. ಆ ಹಿನ್ನೆಲೆಯಲ್ಲಿ ನಾಳೆ ಅಥಾವ ನಾಡಿದ್ದು ಕೇರಳ ಸರ್ಕಾರದ ಜೊತೆ ಕರ್ನಾಟಕ ಸರ್ಕಾರದ ಮುಖ್ಯಕಾರ್ಯದರ್ಶಿ ಟಿ.ಎಂ ವಿಜಯಭಾಸ್ಕರ್ ಮಾತುಕತೆ ನಡೆಸುತ್ತಾರೆ ಎಂದು ಹೇಳಾಗುತ್ತದೆ.