ಯಾದಗಿರಿ : ಮಲತಾಯಿಯೊಬ್ಬಳು 5 ತಿಂಗಳ ಮಗುವನ್ನು ಕೊಲೆ ಮಾಡಿರುವ ಘಟನೆ ನಡೆದಿದೆ.
ಆಸ್ತಿ ವಿಚಾರಕ್ಕೆ ಕೊಲೆ ಮಾಡಿದ್ದಾಳೆ ಎನ್ನಲಾಗಿದ್ದು, ಮೃತ ಮಗುವಿನ ಶವ ಅಂತ್ಯಕ್ರಿಯೆ ಮಾಡಿದ್ದ ಸ್ಥಳದಲ್ಲಿ ಪೊಲೀಸರು ಈಗ ನಿಗಾ ವಹಿಸಿದ್ದಾರೆ. ಜಿಲ್ಲೆಯ ವಡಗೆಸರಾ ತಾಲೂಕಿನ ಬಬಲಾದ ಗ್ರಾಮದಲ್ಲಿ 5 ತಿಂಗಳ ಮಗು ಸಂಗೀತಾಳನ್ನು ಅವಳ ಮಲತಾಯಿ ಹಾಲಿನಲ್ಲಿ ವಿಷ ಹಾಕಿ ಕೊಲೆ ಮಾಡಿದ್ದಳು ಎನ್ನಲಾಗಿದೆ. ನಂತರ ಮುಗುವಿನ ತಾಯಿಯ ತವರೂರು ಚಾಮನಳ್ಳಿ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆದಿತ್ತು. ಸದ್ಯ ಎರಡು ದಿನಗಳ ನಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪೊಲೀಸರು ತನಿಖೆ ಕೈಗೊಂಡಾಗ ಮಲತಾಯಿ ದೇವಮ್ಮ ತಪ್ಪು ಒಪ್ಪಿಕೊಂಡಿದ್ದು, ತನಿಖೆ ದೃಷ್ಟಿಯಿಂದ ಮಗುವಿನ ಶವ ಸಂಸ್ಕಾರ ಮಾಡಿದ ಸ್ಥಳದಲ್ಲಿ ಪೊಲೀಸರ ನಿಗಾವಹಿಸಿದ್ದಾರೆ. ಈಗ ಮರಣೋತ್ತರ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ.