ಚಿಕ್ಕಬಳ್ಳಾಪುರ : ಕಾಂಗ್ರೆಸ್ ನವರು ಮೊಸರಲ್ಲಿ ಕಲ್ಲು ಹುಡುಕುವುದು ಬಿಡಬೇಕು. ಇಲ್ಲ ಅಂದರೇ ನಾನು ಬಾಯಿ ಬಿಡಬೇಕಾಗುತ್ತದೆ ಎಂದು ಕಾಂಗ್ರೆಸ್ ನಾಯಕರಿಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಅವರು ವಾರ್ನಿಂಗ್ ನೀಡಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ಸಿನವರು ಮೊಸರಿನಲ್ಲಿ ಕಲ್ಲು ಹುಡುಕುವುದು ಬಿಡಬೇಕು. ಇಲ್ಲ ಅಂದರೆ ನಾನು ಬಾಯಿ ಬಿಡಬೇಕಾಗುತ್ತೆ. ಯಾರು ಎಲ್ಲೆಲ್ಲಿ ಹೋಗಿದ್ದರು ಯಾರು ಎಲ್ಲಿ ಲೂಟಿ ಮಾಡಿದರು ಅನ್ನೋದು ನನಗೆ ಗೊತ್ತಿದೆ. ಇದನ್ನು ನಾನು ಈಗ ಬಾಯಿ ಬಿಡಬೇಕಾಗುತ್ತದೆ. ಕಾಂಗ್ರೆಸ್ಸಿನವರಿಗೆ ಹಗರಣಗಳು ಮಾಡಿ ಅದೇ ಅಭ್ಯಾಸ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಗರಂ ಆದರು.
ಇದೇ ವೇಳೆ ಪಿಪಿಇ ಕಿಟ್ ವಿಚಾರದಲ್ಲಿ ಹಗರಣದ ನಡಿದಿದೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಆರೋಪದ ಬಗ್ಗೆ ಮಾತನಾಡಿದ ಸುಧಾಕರ್, ಆರೋಗ್ಯ ಇಲಾಖೆಯವರು ಈ ವಿಚಾರದಲ್ಲಿ ಅತ್ಯಂತ ಪಾರದರ್ಶಕವಾಗಿ ಕೆಲಸ ಮಾಡಿದ್ದಾರೆ. ಡಾ. ಮಂಜುನಾಥ್ ಅವರು ಇದನ್ನು ಶಿಫಾರಸು ಮಾಡಿದ್ದಾರೆ. ಸತ್ಯಾಸತ್ಯತೆ ತಿಳಿದು ಆರೋಪ ಮಾಡಲಿ ಎಂದು ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದರು.








