ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳ ಪೈಕಿ ಓರ್ವ ವಿದ್ಯಾರ್ಥಿ ನೀರು ಪಾಲಾಗಿರುವ ಘಟನೆ ನಡೆದಿದೆ.
ಕೊಪ್ಪಳ ಜಿಲ್ಲೆಯ ಕುಕನೂರು ಹತ್ತಿರದ ಕಲ್ಲಿನ ಕ್ವಾರಿಯಲ್ಲಿ ಈ ಘಟನೆ ನಡೆದಿದ್ದು, ಪ್ರದೀಪ್ ಸಾವನ್ನಪ್ಪಿದ ದುರ್ದೈವ ವಿದ್ಯಾರ್ಥಿ ಎನ್ನಲಾಗಿದೆ.
ವಿದ್ಯಾರ್ಥಿ ಪ್ರದೀಪ್, ಕುಕನೂರಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ. ನಿನ್ನೆಯ ದಿನ ರಜೆ ಇರುವ ಹಿನ್ನೆಲೆಯಲ್ಲಿ ವಸತಿ ಶಾಲೆಯ ಕಾಂಪೌಂಡ್ ಹಾರಿ ಈಜಲು ತೆರಳಿದ್ದ. ಈ ಸಂದರ್ಭದಲ್ಲಿ ಕಲ್ಲಿನ ಕ್ವಾರಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಿಬ್ಬಂದಿ ನಿರ್ಲಕ್ಷ್ಯಮಾಡಿದ್ದಾರೆಂಬ ಆರೋಪ ಕೂಡ ಕೇಳಿ ಬಂದಿದೆ.








