“ಸೂಕ್ತ ಸಮಯದಲ್ಲಿ” ಕೈಗೆತ್ತಿಕೊಳ್ಳುವುದಾಗಿ ಹೇಳಿದ ಸುಪ್ರಿಂ ಕೋರ್ಟ್ Saaksha Tv
ನವದೆಹಲಿ: ಹಿಜಾಬ್ – ಕೇಸರಿ ಶಾಲು ವಿವಾದಕ್ಕೆ ಹೈಕೋರ್ಟ್ ಮೌಖಿಕ ಆದೇಶ ನೀಡಿದ್ದ ಈಗ ಸುಪ್ರೀಂ ಕೋರ್ಟ್ ಪ್ರತಿಯೊಬ್ಬ ನಾಗರಿಕನ ಸಾಂವಿಧಾನಿಕ ಹಕ್ಕುಗಳನ್ನು ರಕ್ಷಿಸುವುದಾಗಿ ಹೇಳಿದೆ.
ಹೈಕೋರ್ಟ್ ನ ಮೌಖಿಕ ತೀರ್ಪನ್ನು ಪ್ರಶ್ನಿಸಿ ವಿದ್ಯಾರ್ಥನಿ ಇಂದು ಮನವಿ ಸಲ್ಲಿದ್ದರು. ಈ ಕುರಿತು ವಿಚಾರಣೆ ನಡಡೆಸಿದ ಸುಪ್ರಿಂ ಕೋರ್ಟ್ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳು ಯಾವುದೇ ಧಾರ್ಮಿಕ ಬಟ್ಟೆಯನ್ನು ಧರಿಸಬಾರದು ಎಂದು ಕರ್ನಾಟಕ ಹೈಕೋರ್ಟ್ ನೀಡಿರುವ ನಿರ್ದೇಶನವನ್ನು ಪ್ರಶ್ನಿಸಿ ಅರ್ಜಿಗಳನ್ನು “ಸೂಕ್ತ ಸಮಯದಲ್ಲಿ” ಕೈಗೆತ್ತಿಕೊಳ್ಳುವುದಾಗಿ ತಿಳಿಸಿದೆ.
ಪ್ರಕರಣದಲ್ಲಿ ನಡೆಯುತ್ತಿರುವ ವಿಚಾರಣೆಯನ್ನು ಉಲ್ಲೇಖಿಸಿದ ಸುಪ್ರೀಂ ಕೋರ್ಟ್, “ನಾವು ಪ್ರತಿಯೊಬ್ಬ ನಾಗರಿಕನ ಮೂಲಭೂತ ಹಕ್ಕನ್ನು ರಕ್ಷಿಸುತ್ತೇವೆ ಮತ್ತು ಸೂಕ್ತ ಸಮಯದಲ್ಲಿ ಅದನ್ನು ತೆಗೆದುಕೊಳ್ಳುತ್ತೇವೆ” ಎಂದು ಹೇಳಿದರು.
ತುರ್ತು ವಿಚಾರಣೆಗಾಗಿ ಅರ್ಜಿಯನ್ನು ಪಟ್ಟಿ ಮಾಡುವಂತೆ ಕಾಮತ್ ಒತ್ತಾಯಿಸಿದಾಗ “ನಾವು ನೋಡುತ್ತೇವೆ” ಎಂದು ಸಿಜೆಐ ಹೇಳಿದರು.
ಗುರುವಾರ ‘ಹಿಜಾಬ್’ ಸಮಸ್ಯೆಯನ್ನು ಆಲಿಸಿದ ಕರ್ನಾಟಕ ಹೈಕೋರ್ಟ್‌ನ ತ್ರಿಸದಸ್ಯ ಪೀಠ, ವಿಷಯವನ್ನು ಇತ್ಯರ್ಥವಾಗುವವರೆಗೆ ಶಿಕ್ಷಣ ಸಂಸ್ಥೆಗಳ ಕ್ಯಾಂಪಸ್‌ಗಳಲ್ಲಿ ಜನರನ್ನು ಪ್ರಚೋದಿಸುವ ಯಾವುದೇ ಬಟ್ಟೆಯನ್ನು ಧರಿಸಲು ಒತ್ತಾಯಿಸಬೇಡಿ ಎಂದು ವಿದ್ಯಾರ್ಥಿಗಳಿಗೆ ಹೇಳಿದೆ.









