ರಾಂಚಿ : ವಿದ್ಯಾರ್ಥಿನಿಯರು ಶಾಲಾ ಮುಖ್ಯ ಶಿಕ್ಷಕ ಹಾಗೂ ವಾಚ್ ಮ್ಯಾನ್ ಬಗ್ಗೆ ಗಂಭೀರ ಆರೋಪ ಮಾಡಿದ್ದಾರೆ.
ಈ ಘಟನೆ ಜಾರ್ಖಂಡ್ ನ ಡುಮ್ಕಾ ಜಿಲ್ಲೆಯಲ್ಲಿ ನಡೆದಿದೆ. ಮುಖ್ಯ ಶಿಕ್ಷಕ ಕುಡಿಯಲು ಪೋಷಕರಿಂದ ಹಣ ಪಡೆಯುತ್ತಾನೆ. ವಾಚ್ಮ್ಯಾನ್ ಅಶ್ಲೀಲ ವೀಡಿಯೋ ನೋಡಿ ಲೈಂಗಿಕ ಕಿರುಕುಳ ನೀಡುತ್ತಾನೆ ಎಂದು ವಸತಿ ಶಾಲೆಯ (School) ವಿದ್ಯಾರ್ಥಿನಿಯರು ಕಮೀಷನರ್ ಗೆ ದೂರು ಸಲ್ಲಿಸಿದ್ದಾರೆ.
ಪತ್ರದಲ್ಲಿ ನಾವು ತುಂಬಾ ಶೋಚನೀಯ ಸ್ಥಿತಿಯಲ್ಲಿ ವ್ಯಾಸಂಗ ಮಾಡುತ್ತಿದ್ದೇವೆ. ಶಾಲೆಯ ಕಾವಲುಗಾರ ಅಶ್ಲೀಲ ವೀಡಿಯೊಗಳನ್ನು ವೀಕ್ಷಿಸಿ ಲೈಂಗಿಕ ಕಿರುಕುಳ ನೀಡುತ್ತಾನೆ. ತುಂಬಾ ಭಯ ಮತ್ತು ನೋವಿನಲ್ಲಿದ್ದೇವೆ. ದಯವಿಟ್ಟು ಕ್ರಮ ತೆಗೆದುಕೊಳ್ಳಿ ಎಂದು ಮನವಿ ಮಾಡಿದ್ದಾರೆ.
ಜಾತಿ ಆಧಾರಿತ ಅವಹೇಳನಕಾರಿ ಪದಗಳನ್ನು ಬಳಸಲಾಗುತ್ತಿದೆ. ವಸತಿ ಶಾಲೆಯಲ್ಲಿನ ಶಿಕ್ಷಕರು ಹಾಗೂ ಶಾಲಾ ಸಿಬ್ಬಂದಿ ಮನೆಕೆಲಸಗಳನ್ನು ಮಾಡಲು ಮನೆಗೆ ಕರೆದೊಯ್ಯುತ್ತಿದ್ದಾರೆ. ಕುಡಿಯಲು ಪ್ರಾಂಶುಪಾಲ ತಮ್ಮ ಪೋಷಕರಿಂದ ಹಣ ಪಡೆಯುತ್ತಾರೆ ಎಂದು ಆರೋಪಿಸಿದ್ದಾರೆ. ಸದ್ಯ ನಾಲ್ವರು ಶಿಕ್ಷಕರ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ (FIR) ದಾಖಲಿಸಿಕೊಳ್ಳಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.