ಅಲ್ಲು ಅರ್ಜುನ್ ಅಭಿಮಾನಿಗಳಿಗೆ ಭರ್ಜರಿ ಸಿಹಿ ಸುದ್ದಿ ನೀಡಿದ್ದಾರೆ.
ಸದ್ಯ ಈ ಸಿಹಿ ಸುದ್ದಿ ‘ಪುಷ್ಪ 2’ ಚಿತ್ರದ್ದಾಗಿದೆ. ಅಲ್ಲು ಅರ್ಜುನ್ ಹುಟ್ಟುಹಬ್ಬದ ದಿನವೇ ಚಿತ್ರದ ಟೀಸರ್ ಬಿಡುಗಡೆಯಾಗಲಿದೆ ಎನ್ನಲಾಗುತ್ತಿದೆ. ಪುಷ್ಪ’ ಸಕ್ಸಸ್ ನಂತರ ಪುಷ್ಪ 2 ಚಿತ್ರದ ಮೇಲೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟಿದ್ದರು. ಅಲ್ಲು ಅರ್ಜುನ್ ಬರ್ತ್‌ಡೇ ಅಂದರೆ ಏ.8ರಂದು ಚಿತ್ರದ ಟೀಸರ್ ಬಿಡುಗಡೆ ಮಾಡುವುದಾಗಿ ಚಿತ್ರ ತಂಡ ಅಧಿಕೃತವಾಗಿ ಘೋಷಿಸಿದೆ.
ಪುಷ್ಪ ಪಾರ್ಟ್ 2ಗೆ ಪುಷ್ಪ: ದಿ ರೈಸ್ ಎನ್ನುವ ಶೀರ್ಷಿಕೆ ಇಡಲಾಗಿದೆ. ಮೊದಲ ಭಾಗದಲ್ಲಿ ಕೇವಲ ಕಾರ್ಮಿಕನಂತಿದ್ದ ಪುಷ್ಪರಾಜ್ ಈಗ ರಕ್ತಚಂದನದ ಕಳ್ಳಸಾಗಣೆಯಲ್ಲಿ ಆತನೇ ಕಿಂಗ್‌ಪಿನ್ ಆಗಿ ಬೆಳೆದಿರುತ್ತಾನೆ. ಮೊದಲ ಭಾಗದಲ್ಲಿ ವಿದೇಶದ ರೆಫರೆನ್ಸ್ ನೀಡಲಾಗಿತ್ತು. ರಕ್ತಚಂದನ ಜಪಾನ್‌ಗೆ ರಫ್ತಾಗಲಿದೆ ಎಂಬುವುದನ್ನು ತೋರಿಸಲಾಗಿತ್ತು. ಈಗ ಎರಡನೇ ಭಾಗದ ಕತೆ ಕೂಡ ವಿದೇಶದಲ್ಲಿಯೇ ಸಾಗಲಿದೆ ಎನ್ನಲಾಗುತ್ತಿದೆ.
‘ಪುಷ್ಪ 2’ನಲ್ಲಿ ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ, ಫಹಾದ್ ಫಾಸಿಲ್, ಕನ್ನಡದ ನಟ ಡಾಲಿ ಸೇರಿದಂತೆ ಅನೇಕರು ನಟಿಸಿದ್ದಾರೆ. ಈ ಸಿನಿಮಾ ಆಗಷ್ಟ್ 15ರಂದು ಬಿಡಗುಡೆಯಾಗಲಿದೆ.