ಭೀಕರ ಅಪಘಾತ | 4 ಇಂಜನೀಯರಿಂಗ್ ವಿದ್ಯಾರ್ಥಿಗಳ ಸಾವು Saaksha Tv
ಬೆಂಗಳೂರು ಗ್ರಾಮಂತರ: ಭೀಕರ ಅಪಘಾತ ಸಂಭವಿಸಿದ ಪರಿಣಾಮ ನಾಲ್ವರು ಎಂಜಿನಿಯರ್ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹೊಸಕೋಟೆ ತಾಲೂಕಿನ ಅಟ್ಟೂರು ಗೇಟ್ ಬಳಿ ನಡೆದಿದೆ.
ವೈಷ್ಣವಿ, ಭರತ್, ಸಿರಿಲ್, ಮತ್ತು ವೆಂಕಟ್ ಮೃತ ದುರ್ದೈವಿಗಳು. ಶ್ರೀಕೃಷ್ಣ, ಅಂಕಿತಾ ರೆಡ್ಡಿ ಎಂಬುವವರಿಗೆ ಗಂಭೀರ ಗಾಯವಾಗಿದೆ. ತಮಿಳುನಾಡು ಮೂಲದ TN 77, P 4512 ಸಂಖ್ಯೆಯ ಕಾರಿನಲ್ಲಿ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳು ಕೋಲಾರಕ್ಕೆ ಹೋಗಿ ಬೆಂಗಳೂರಿಗೆ ವಾಪಸ್ ಆಗುತ್ತಿದ್ದಾಗ ದುರ್ಘಟನೆ ನಡೆದಿದೆ. ಕಾರಿನಲ್ಲಿ ಆರು ವಿದ್ಯಾರ್ಥಿಗಳು ಇದ್ದರು ಎನ್ನಲಾಗಿದೆ. ದುರ್ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದು, ಇಬ್ಬರಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ಹೊಸಕೋಟೆಯ ಶ್ರೀನಿವಾಸ ಆಸ್ಪತ್ರೆಗೆ ಸೇರಿಸಲಾಗಿದೆ. ಶವಗಳನ್ನು ಎಂವಿಜೆ ಆಸ್ಪತ್ರೆ ಶವಾಗಾರಕ್ಕೆ ಸಾಗಿಸಲಾಗಿದೆ.
ಮೃತರೆಲ್ಲರೂ ಗಾರ್ಡನ್ ಸಿಟಿ ಕಾಲೇಜಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಎನ್ನಲಾಗಿದೆ. ಮೊದಲು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದಿದೆ. ನಂತರ ಎದುರಿನಿಂದ ಬರ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ನುಜ್ಜುಗುಜ್ಜಾಗಿದೆ. ಸ್ಥಳಕ್ಕೆ ಹೊಸಕೋಟೆ ಸಿಪಿಐ ಮಂಜುನಾಥ್ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.









