ಇಸ್ಲಾಮಾಬಾದ್: ಉಗ್ರನಿಗೆ ಜೈಲಿನಲ್ಲಿಯೇ ವಿಷ ಪ್ರಾಶನ ನೀಡಿರುವ ಘಟನೆಯೊಂದು ಪಾಕ್ ನಲ್ಲಿ ನಡೆದಿದೆ.
ಭಾರತಕ್ಕೆ (India) ಬೇಕಾಗಿದ್ದ ಮೋಸ್ಟ್ ವಾಂಟೆಡ್ ಉಗ್ರನೊಬ್ಬನಿಗೆ ಪಾಕ್ ಜೈಲಿನಲ್ಲಿ ವಿಷ ಪ್ರಾಶನ ನೀಡಲಾಗಿದೆ ಎನ್ನಲಾಗಿದೆ. ಮುಂಬೈ ದಾಳಿಯ (Mumbai 26/11 Attacks) ಪ್ರಮುಖ ಸಂಚುಕೋರ, ಲಷ್ಕರ್ ತೊಯ್ಬಾ ಉಗ್ರ ಸಂಘಟನೆಯ ಪ್ರಮುಖ ಸದಸ್ಯ ಸಾಜಿದ್ ಮಿರ್ (Sajid Mir) ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ವರದಿಯಾಗಿದೆ.
ಸಾಜಿದ್ ಮಿರ್ ನನ್ನು ಲಾಹೋರ್ ಜೈಲಿನಿಂದ ಡೇರಾ ಘಾಜಿ ಖಾನ್ ಜೈಲಿಗೆ ಸ್ಥಳಾಂತರ ಮಾಡಲಾಗಿತ್ತು. ಈಗ ವಿಷ ಸೇವಿಸಿ ಗಂಭೀರವಾಗಿ ಅಸ್ವಸ್ಥಗೊಂಡಿದ್ದಾನೆ. ವಿಷ ಪ್ರಾಶನ ಪ್ರಕರಣ ವರದಿಯಾದ ಬೆನ್ನಲ್ಲೇ ಜೈಲಿನಲ್ಲಿದ್ದ ಅಡುಗೆ ಮಾಡುತ್ತಿದ್ದ ವ್ಯಕ್ತಿ ನಾಪತ್ತೆಯಾಗಿದ್ದಾನೆ. 2008ರ ನವೆಂಬರ್‌ನಲ್ಲಿ ಮುಂಬೈನಲ್ಲಿ ನಡೆದ ಭಯೋತ್ಪಾದಕ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತಕ್ಕೆ ಬೇಕಾಗಿದ್ದಾನೆ.