ಬೆಂಗಳೂರು: ಚಾಮರಾಜಪೇಟೆಯಲ್ಲಿ ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದ ಬೆನ್ನಲ್ಲೇ ಅಮೃತಹಳ್ಳಿ ಪೊಲೀಸ್ ಠಾಣಾ (Amruthahalli Poice Station) ವ್ಯಾಪ್ತಿಯಲ್ಲಿ ಹಸುಗಳು (Cow) ಕಳ್ಳತನವಾಗಿರುವ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಹೆಲ್ಮೆಟ್ ಧರಸಿ ಬಂದಿದ್ದ ಆಗುಂತಕನೊಬ್ಬ 2 ಲಕ್ಷ ರೂ. ಮೌಲ್ಯದ ಮೂರು ಹಸುಗಳನ್ನು ಕಳ್ಳತನ ಮಾಡಿ ಪರಾರಿಯಾಗಿದ್ದಾನೆ. ಕಳ್ಳನ ಕೈಚಳಕದ ದೃಶ್ಯ ಸಿಸಿಟಿವಿಯಲ್ಲಿ (CCTV) ಸೆರೆಯಾಗಿದೆ.
ಜಕ್ಕೂರಿನ ಸರ್ಕಾರಿ ಶಾಲೆಯ ಸಮೀಪ ಖಾಲಿ ಜಾಗದಲ್ಲಿ ಹಸುಗಳನ್ನು ಕಟ್ಟಿಹಾಕಲಾಗಿತ್ತು. ಆದರೆ, ಜ.15ರಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಕಾಣೆಯಾಗಿವೆ. ಹುಡುಕಾಟ ನಡೆಸಿದ್ದ ಮಾಲೀಕರು ಅಮೃತಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಕುರಿತು ಜ.19ರಂದು ಎಫ್‌ಐಆರ್ ದಾಖಲಾಗಿದೆ.
ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಓರ್ವ ವ್ಯಕ್ತಿಯನ್ನು ಬಂಧಿಸಿದ್ದಾರೆ. ಈ ಕುರಿತು ತನಿಖೆ ನಡೆಸುತ್ತಿದ್ದಾರೆ.








