ಯಾದಗಿರಿ: ಅರಣ್ಯ ಇಲಾಖೆಯ ಅಧಿಕಾರಿಗಳ ಸುಪರ್ದಿಯಲ್ಲಿದ್ದ ಶ್ರೀಗಂಧದ ಮರ ಕಳ್ಳತನವಾಗಿರುವ ಘಟನೆ ನಡೆದಿದೆ.
ಯಾದಗಿರಿಯ (Yadagiri) ಅರಣ್ಯ ಇಲಾಖೆಯಲ್ಲಿ ಲಕ್ಷಾಂತರ ರೂ. ಮೌಲ್ಯದ ಶ್ರೀಗಂಧದ ಕಟ್ಟಿಗೆ ಕಳ್ಳತನವಾಗಿವೆ. ಕಳ್ಳತನ ಮಾಡಿದ್ದ ಶ್ರೀಗಂಧದ ಕಟ್ಟಿಗೆಗಳನ್ನು ಜಪ್ತಿ ಮಾಡಿ ಕಚೇರಿಯಲ್ಲಿ ಇಡಲಾಗಿತ್ತು. ಕಚೇರಿಯಿಂದಲೇ ಶ್ರೀಗಂಧ ಕಟ್ಟಿಗೆ ಕಳ್ಳತನವಾಗಿರುವುದು ಭಾರೀ ಅನುಮಾನ ಕಾಣುತ್ತಿದೆ.
ಕಳೆದ ನಾಲ್ಕೈದು ದಿನಗಳ ಹಿಂದೆ ಯಾದಗಿರಿ ಜಿಲ್ಲಾ ಕೆಂದ್ರದ ಅರಣ್ಯ ಇಲಾಖೆಯ ಕಚೇರಿಯಲ್ಲಿ 8.58 ಲಕ್ಷ ರೂ. ಮೌಲ್ಯದ 85 ಕೆ.ಜಿ ಶ್ರೀಗಂಧದ ಕಟ್ಟಿಗೆಗಳು ಕಳ್ಳತನವಾಗಿವೆ. ಉಪ ವಲಯ ಅರಣ್ಯಾಧಿಕಾರಿ ಕಾಜೋಲ್ ಪಾಟೀಲ್ ಅವರ ಕಚೇರಿ ಪಕ್ಕದಲ್ಲಿರುವ ವಲಯ ಅರಣ್ಯಾಧಿಕಾರಿ ಕಚೇರಿಯಲ್ಲಿನ ಶೌಚಾಲಯದಲ್ಲಿ ಈ ಶ್ರೀಗಂಧ ಕಟ್ಟಿಗೆಗಳನ್ನು ಭದ್ರವಾಗಿ ಶೇಖರಿಸಿಡಲಾಗಿತ್ತು. ಆದರೆ, ಖದೀಮರು ಕಳ್ಳತನ ಮಾಡಿ ಪರಾರಿಯಾಗಿದ್ದಾರೆ. ಸದ್ಯ ಘಟನೆಯ ಸುದ್ದಿ ಹೊರ ಬರುತ್ತಿದ್ದಂತೆ ಸಂಶಯ ವ್ಯಕ್ತವಾಗುತ್ತಿದೆ.