ಹಾಸನ: ಕೆರೆಗೆ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲಾಗಿರುವ ಘಟನೆ ನಡೆದಿದೆ.
ಶಾಲೆಗೆ ರಜೆ ಇರುವ ಹಿನ್ನೆಲೆಯಲ್ಲಿ ಕೆರೆಯಲ್ಲಿ ಕೆರೆಗೆ ತೆರಳಿದ್ದರು ಎನ್ನಲಾಗಿದೆ. ಬೇಲೂರು (Belur) ತಾಲೂಕಿನ ನರಸೀಪುರ ಗ್ರಾಮದಲ್ಲಿ ಕೆರೆಯಲ್ಲಿ ಮುಳುಗಿ (drowned) ಮೂವರು ಮಕ್ಕಳು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ದೀಕ್ಷಿತ್(10), ನಿತ್ಯಾಶ್ರೀ(12), ಕುಸುಮಾ(6) ಮೃತಪಟ್ಟವರು. ಮೃತರು ಕೆರೆಗೆ ಹಸುಗಳನ್ನು ಮೇಯಿಸಲು ತೆಗೆದುಕೊಂಡು ಹೋಗಿದ್ದರು ಎನ್ನಲಾಗಿದೆ.
ಘಟನಾ ಸ್ಥಳದಲ್ಲಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. ಸ್ಥಳೀಯರು ಕೆರೆಯಿಂದ ಶವಗಳನ್ನು ಹೊರಕ್ಕೆ ತೆಗೆದಿದ್ದಾರೆ. ಹಳೆಬೀಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.