ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿಗೆ ಕೆ ಎಲ್ ರಾಹುಲ್ ಉಪನಾಯಕ…..
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರು ಪಂದ್ಯಗಳ ಟೆಸ್ಟ್ ಸರಣಿ ಡಿಸೆಂಬರ್ 26 ರಿಂದ ಆರಂಭವಾಗಲಿದೆ, ಈಗಾಗಲೆ ಗಾಯಗೊಂಡಿರುವ ರೋಹಿತ್ ಶರ್ಮಾ ಟೆಸ್ಟ್ ಸರಣಿಯಿಂದ ಹೊರಗುಳಿಯಲಿದ್ದು, ಅವರ ಜಾಗಕ್ಕೆ ಅನುಭವಿ ಆರಂಭಿಕ ಆಟಗಾರ ಕೆಎಲ್ ರಾಹುಲ್ ಅವರನ್ನು ಟೆಸ್ಟ್ ತಂಡದ ನೂತನ ಉಪನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ. ದಕ್ಷಿಣ ಆಫ್ರಿಕಾ ಸರಣಿಗೆ ರಾಹುಲ್ ಟೆಸ್ಟ್ ತಂಡದ ಉಪನಾಯಕರಾಗಲಿದ್ದಾರೆ ಎಂದು ಬಿಸಿಸಿಐ ಮೂಲಗಳು ಖಚಿತಪಡಿಸಿವೆ.
ಸದ್ಯ ಕೆಎಲ್ ರಾಹುಲ್ ಉತ್ತಮ ಫಾರ್ಮ್ ನಲ್ಲಿದ್ದಾರೆ. ರಾಹುಲ್ ಎಲ್ಲಾ ಮೂರು ಮಾದರಿಯ ಕ್ರಿಕೆಟ್‌ನಲ್ಲಿ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ. ಇಂಗ್ಲೆಂಡ್ ಪ್ರವಾಸದ ನಂತರ ಅವರು ಟೆಸ್ಟ್ ತಂಡಕ್ಕೆ ಕಂಬ್ಯಾಕ್ ಮಾಡಿದ್ದರು. ರಾಹುಲ್ 8 ಇನ್ನಿಂಗ್ಸ್ ಗಳಲ್ಲಿ 39.38 ಸರಾಸರಿಯಲ್ಲಿ ಒಟ್ಟು 315 ರನ್ ಗಳಿಸಿದರು.
2014ರಲ್ಲಿ ಆಸ್ಟ್ರೇಲಿಯಾ ಪ್ರವಾಸದಲ್ಲಿ ರಾಹುಲ್ ಟೆಸ್ಟ್‌ಗೆ ಪದಾರ್ಪಣೆ ಮಾಡಿದ್ದರು. ಇದುವರೆಗೆ ಆಡಿರುವ 40 ಟೆಸ್ಟ್ ಪಂದ್ಯಗಳಲ್ಲಿ 35.17ರ ಸರಾಸರಿಯಲ್ಲಿ 2321 ರನ್ ಗಳಿಸಿದ್ದಾರೆ. 68 ಇನ್ನಿಂಗ್ಸ್‌ಗಳಲ್ಲಿ ರಾಹುಲ್ 6 ಶತಕ ಮತ್ತು 12 ಅರ್ಧ ಶತಕ ಗಳಿಸಿದ್ದಾರೆ.