ಕೊಡಗು: ನದಿಗೆ ಈಜಲು ಇಳಿದಿದ್ದ ಮೂವರು ನೀರುಪಾಲಾಗಿರುವ ಘಟನೆ ನಡೆದಿದೆ.
ಈ ಘಟನೆ ಜಿಲ್ಲೆಯ ಕುಶಾಲನಗರ ತಾಲೂಕಿನ ಕೂಡಿಗೆ ಗ್ರಾಮದಲ್ಲಿ ನಡೆದಿದೆ. ಮೂವರ ಪೈಕಿ ಓರ್ವ ವ್ಯಕ್ತಿ ಮೃತದೇಹ ಮಾತ್ರ ಪತ್ತೆಯಾಗಿದ್ದು, ಉಳಿದವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಚಿಕ್ಕತ್ತೂರು ಗ್ರಾಮದ ಶ್ರೀನಿವಾಸ್(24) ಮೃತದೇಹ ಪತ್ತೆಯಾಗಿದೆ. ಸ್ಥಳದಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಹುಡುಕಾಟ ನಡೆಸಿದ್ದಾರೆ.








