ಮಂಡ್ಯ: ‘ರಾಜ್ಯದಲ್ಲಿ ತುಘಲಕ್ ಸರ್ಕಾರ ಅಸ್ತಿತ್ವದಲ್ಲಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮನಗರ ಕಾರಾಗೃಹಕ್ಕೆ ಕರೆತಂದಿದ್ದ ಐವರಲ್ಲಿ ಕೋವಿಡ್ 19 ಪತ್ತೆಯಾಗಿದೆ. ಆದರೆ ಮೂವರ ಪ್ರಕರಣ ಮುಚ್ಚಿ ಹಾಕಲು ಸರ್ಕಾರವೇ ಯತ್ನಿಸಿದೆ ಎಂದು ಆರೋಪಿಸಿದರು.
ಇದೇ ವೇಳೆ ಸರ್ಕಾರದ ಮೇಲೆ ಗಂಭೀರ ಆರೋಪ ಮಾಡಿದ ಹೆಚ್ ಡಿಕೆ, ‘ಕೋವಿಡ್ ಪ್ರಕರಣಗಳಲ್ಲಿ ಸರ್ಕಾರ ದುಡ್ಡು ಹೊಡೆಯುವ ಕೆಲಸ ಮಾಡುತ್ತಿದೆ. ಮುಂದಿನ ದಿನಗಳಲ್ಲಿ ಎಲ್ಲವನ್ನೂ ಬಹಿರಂಗಗೊಳಿಸುತ್ತೇನೆ’ ಎಂದರು.
ಇನ್ನು’ಶ್ರೀರಂಗಪಟ್ಟಣದಲ್ಲಿ ಆಶಾ ಕಾರ್ಯಕರ್ತೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಯಾವೊಬ್ಬ ಅಧಿಕಾರಿಯೂ ಅವರ ಆರೋಗ್ಯ ವಿಚಾರಿಸಿಲ್ಲ’ ಎಂದು ಕುಮಾರಸ್ವಾಮಿ ದೂರಿದರು.








