Udupi: ಕರ್ನಾಟಕ ವಿಧಾನಸಭಾ ಚುನಾವಣೆ (Karnataka Election 2023) ಷೋಷಣೆಯಾಗುತ್ತಿದ್ದಂತೆ ರಾಜ್ಯದಲ್ಲಿ ರಾಜಕೀಯ ಬದಲಾವಣೆಗಳಾಗುತ್ತಿವೆ. ಹಲವರು ಪಕ್ಷಾಂತರವಾಗುತ್ತಿದ್ದಾರೆ. ಈ ಮಧ್ಯೆ ಸೋಲಿಲ್ಲದ ಸರದಾರ ಎಂದೇ ಖ್ಯಾತಿ ಗಳಿಸಿದ್ದ ಹಾಲಾಡಿ ಶ್ರೀನಿವಾಸ ಮೂರ್ತಿ ರಾಜಕೀಯ ನಿವೃತ್ತಿ ಪಡೆದಿದ್ದಾರೆ. ಅದರಲ್ಲಿಯೂ ಗುರುವಿನ ಋಣ ತೀರಿಸಲು ನಿರ್ಧರಿಸಿದ್ದಾರೆ.
ಹಾಲಾಡಿ ಶ್ರೀನಿವಾಸ ಶೆಟ್ಟಿ (Halady Srinivas Shetty) ಕುಂದಾಪುರದ ವಾಜಪೇಯಿ ಎಂದೇ ಖ್ಯಾತಿ ಗಳಿಸಿದ್ದರು. ಬರೋಬ್ಬರಿ 25 ವರ್ಷಗಳ ಕಾಲ ಹಾಲಾಡಿ ಶ್ರೀನಿವಾಸ ಶೆಟ್ಟಿ ಕುಂದಾಪುರದ ಶಾಸಕರಾಗಿದ್ದಾರೆ. ಈ ಬಾರಿ ಕೂಡ ಹಾಲಾಡಿ ಶ್ರೀನಿವಾಸ ಶೆಟ್ಟಿ ತಮ್ಮ ಕೊನೆಯ ಚುನಾವಣೆಯನ್ನು ಎದುರಿಸುತ್ತಾರೆ ಎಂಬ ಮಾತುಗಳಿದ್ದವು. ಆದರೆ ಹಾಲಾಡಿ ಶ್ರೀನಿವಾಸ ಶೆಟ್ಟಿ, ರಾಜಕೀಯ ನಿವೃತ್ತಿಯನ್ನು ಘೋಷಿಸಿದ್ದಾರೆ. ಸದ್ಯದ ರಾಜಕೀಯಕ್ಕೆ ನನ್ನ ಮನಸ್ಸು ಒಪ್ಪುತ್ತಿಲ್ಲ ಎಂದು ಅವರು ಆಪ್ತರೊಂದಿಗೆ ಹೇಳಿಕೊಂಡಿದ್ದಾರೆ ಎನ್ನಲಾಗಿದೆ.
ಭಾನುವಾರ ಬೆಂಗಳೂರಿನಲ್ಲಿ ನಡೆದ ಬಿಜೆಪಿ (BJP) ಕೋರ್ ಕಮಿಟಿ ಸಭೆಯಲ್ಲೂ ಹಾಲಾಡಿ ಭಾಗವಹಿಸಿದ್ದರು. ರಾಜ್ಯದ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಮುಂದೆ ಪಕ್ಷ ಅವಕಾಶ ಕೊಟ್ಟರೆ ಸ್ಪರ್ಧಿಸುವುದಾಗಿ ಹೇಳಿದ್ದರು. ಆದರೆ ಇದ್ದಕ್ಕಿದ್ದಂತೆ ತಮ್ಮ ಆಪ್ತರ ಜೊತೆ ನಿವೃತ್ತಿಯ ಮಾತುಗಳನ್ನಾಡಿ, ಪ್ರಕಟಣೆ ಹೊರಡಿಸಿದ್ದಾರೆ.
ಕುಂದಾಪುರ ಕ್ಷೇತ್ರದ( Kundapura Assembly constituency) ಜನ ನನ್ನನ್ನು ಐದು ಬಾರಿ ಆಯ್ಕೆ ಮಾಡಿದ್ದಾರೆ. ಗ್ರಾಮೀಣ ಭಾಗ ಹೆಚ್ಚಿರುವ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯ ಮಾಡುವ ಅವಕಾಶ ಸಿಕ್ಕಿದೆ. ಕುಂದಾಪುರ ಕ್ಷೇತ್ರದ ಶಾಸಕನಾಗಿ ನಿಷ್ಠೆಯಿಂದ, ಪ್ರೀತಿಯಿಂದ ಕೆಲಸ ಮಾಡಿದ್ದೇನೆ. ಆದರೆ, ಸ್ವಇಚ್ಛೆಯಿಂದ ಸ್ಪರ್ಧಿಸದಿರಲು ನಿರ್ಧರಿಸಿದ್ದೇನೆ ಎಂದು ಹೇಳಿದ್ದಾರೆ.
ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರನ್ನು ಮೂರನೇ ಹಣಕಾಸು ಆಯೋಗದ ಅಧ್ಯಕ್ಷರಾಗಿದ್ದ ಎ.ಜಿ ಕೊಡ್ಗಿ ರಾಜಕೀಯಕ್ಕೆ ಕರೆದುಕೊಂಡು ಬಂದಿದ್ದರು. ಆರಂಭದ ಎರಡು ಅವಧಿಗಳಲ್ಲಿ ಹಾಲಾಡಿಯ ಗೆಲುವಿನ ಹಿಂದೆ ಕೊಡ್ಗಿ ಬೆಂಬಲ ಇತ್ತು. ಗುರುವಿನ ಋಣ ತೀರಿಸಲು ಎ.ಜಿ. ಕೊಡ್ಗಿ (AG Kodgi) ಅವರ ಪುತ್ರ ಕಿರಣ್ ಕೊಡ್ಗಿ ಅವರಿಗೆ ಈ ಬಾರಿ ಕುಂದಾಪುರದ ಟಿಕೆಟ್ ಕೊಡಿಸಲು ಹಾಲಾಡಿ ಉತ್ಸುಕರಾಗಿದ್ದಾರೆ.








