ವಸತಿ ರಹಿತ ಗ್ರಾಮೀಣ ಜನತೆ ಕೇಂದ್ರದ ಸಿಹಿ ಸುದ್ದಿ….
ವಸತಿ ರಹಿತ ಗ್ರಾಮೀಣ ಜನತೆಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿಯೊಂದನ್ನ ನೀಡಿದೆ. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಪ್ರಧಾನಮಂತ್ರಿ ಆವಾಸ್ ಗ್ರಾಮೀಣ ಯೋಜನೆಯನ್ನು 2024ರ ವರೆಗೆ ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ತೀರ್ಮಾನಿಸಿದೆ.
ಪ್ರಧಾನಮಂತ್ರಿ ಆವಾಸ್ ಗ್ರಾಮೀಣ ಯೋಜನೆಯಡಿ ಈವರೆಗೆ 1 ಕೋಟಿ 65 ಲಕ್ಷ ಮನೆಗಳನ್ನು ನಿರ್ಮಿಸಲಾಗಿದೆ. ಯೋಜನೆ ಅವಧಿ ವಿಸ್ತರಣೆಯಿಂದ ಗ್ರಾಮೀಣ ಭಾಗದಲ್ಲಿ 2 ಕೋಟಿ 95 ಲಕ್ಷ ಮನೆಗಳು ನಿರ್ಮಿಸಲು ಗುರಿ ಇಟ್ಟುಕೊಳ್ಳಲಾಗಿದೆ.
ಈ ಯೋಜನೆಗಾಗಿ 2 ಲಕ್ಷದ 17 ಸಾವಿರ ಕೋಟಿ ರೂಪಾಯಿ ಮಂಜೂರು ಮಾಡಲಾಗಿದೆ. ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಸಿಂಗ್ ಠಾಕೂರ್ ಮಾಹಿತಿ ತಿಳಿಸಿದರು.








