ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿರುವ ಘಟನೆ ನಡೆದಿದೆ.
ಈ ಘಟನೆ ಬೆಂಗಳೂರಿನ ಕೊತ್ತನೂರಿನಲ್ಲಿ ನಡೆದಿದೆ. ಮನೆ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳು ಬೆಂಕಿಗೆ ಆಹುತಿಯಾಗಿವೆ. ಬೆಂಕಿಯ ಕೆನ್ನಾಲಿಗೆಗೆ ಬೈಕ್ಗಳು ಧಗಧಗನೆ ಹೊತ್ತಿ ಉರಿದಿವೆ. ಹಳೆ ವೈಷಮ್ಯಕ್ಕೆ ಸ್ಕೂಟಿ ಹಾಗೂ ಬೈಕ್ಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಸ್ಥಳೀಯ ನಿವಾಸಿ ಪುಷ್ಪಾ ಎಂಬುವವರಿಗೆ ಸೇರಿದ ಸ್ಕೂಟಿ ಹಾಗೂ ಬೈಕ್ ಗಳು ಬೆಂಕಿಗೆ ಹೊತ್ತಿ ಉರಿದಿವೆ.