ನಟಿ ‘ತ್ರಿಷಾ (Trisha Krishnan) ಬಗ್ಗೆ ಕೀಳು ಹೇಳಿಕೆ ನೀಡಿದ್ದ ನಟ ಮನ್ಸೂರ್ ಅಲಿ ಖಾನ್ ಕ್ಷಮೆ ಕೇಳಿದ್ದಾರೆ.
ನಟಿ ತ್ರಿಷಾ ರೇಪ್ ಕುರಿತಂತೆ ಹೇಳಿಕೆ ನೀಡಿದ್ದ ನಟ ಮನ್ಸೂಲ್ ಅಲಿ ಖಾನ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಚೆನ್ನೈ ಪೊಲೀಸರು ಮನ್ಸೂರ್ ಅವರನ್ನು ಅರೆಸ್ಟ್ ಮಾಡಿ ವಿಚಾರಣೆ ನಡೆಸಿದ್ದರು. ಇದರ ಬೆನ್ನಲ್ಲಿಯೇ ಕ್ಷಮೆ ಕೋರಿದ್ದಾರೆ ಎನ್ನಲಾಗಿದೆ.
ದಳಪತಿ ವಿಜಯ್ ನಟನೆಯ ‘ಲಿಯೋ’ ಸಿನಿಮಾ ಬಿಡುಗಡೆಯಾಗಿತ್ತು. ತ್ರಿಷಾ ಅವರು ವಿಜಯ್ ಪತ್ನಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈ ಚಿತ್ರದಲ್ಲಿ ಮನ್ಸೂರ್ ಅಲಿ ನಟಿಸಿದ್ದರು. ಆದರೆ, ‘ತ್ರಿಷಾ ಜೊತೆ ನಟಿಸುತ್ತೇನೆ ಎಂದಾಗ ಬೆಡ್ರೂಂ ದೃಶ್ಯ ಇರಬಹುದು ಎಂದು ನಾನು ಭಾವಿಸಿದೆ. ಈ ಮೊದಲ ಸಿನಿಮಾಗಳಲ್ಲಿ ನಟಿಯರನ್ನು ಬೆಡ್ರೂಂಗೆ ಕರೆದುಕೊಂಡು ಹೋಗುವ ದೃಶ್ಯ ಇದ್ದವು. ಹಾಗೆ ಇತ್ತು ಅಂದುಕೊಂಡಿದ್ದೆ. ಆದರೆ, ಇರಲಿಲ್ಲ. ಅವರನ್ನು ನೋಡಲೂ ಅವಕಾಶ ಕೊಡಲಿಲ್ಲ ಎಂದು ಹೇಳಿದ್ದರು. ಇದಕ್ಕೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ‘ಸಹನಟಿ ತ್ರಿಷಾ ಅವರೇ ನನ್ನನ್ನು ಕ್ಷಮಿಸಿ’ ಎಂದು ಮನ್ಸೂರ್ ಹೇಳಿರುವುದಾಗಿ ಟ್ರೇಡ್ ಅನಲಿಸ್ಟ್ ರಮೇಶ್ ಬಾಲಾ ಟ್ವೀಟ್ ಮಾಡಿದ್ದಾರೆ.








