ಪಾಟ್ನಾ: ರೀಲ್ಸ್ ಮಾಡುವುದನ್ನು ವಿರೋಧಿಸಿದ್ದಕ್ಕೆ ಪತ್ನಿಯೊಬ್ಬಳು ಅಪ್ಪ- ಅಮ್ಮನೊಂದಿಗೆ ಸೇರಿ ಗಂಡನನ್ನೇ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಈ ಘಟನೆ ಬಿಹಾರದ (Bihar) ಬೇಗುಸರಾಯ್ನಲ್ಲಿ (Begusarai) ನಡೆದಿದೆ. ಮಹೇಶ್ವರ್ ಕುಮಾರ್ ಸಾವನ್ನಪ್ಪಿದ ದುರ್ದೈವಿ. ಈ ವ್ಯಕ್ತಿ ಕೋಲ್ಕತ್ತಾದಲ್ಲಿ (Kolkata) ಕೂಲಿ ಕೆಲಸ ಮಾಡುತ್ತಿದ್ದರು. ಪತ್ನಿ ರಾಣಿಕುಮಾರಿಗೆ ರೀಲ್ಸ್ ಮಾಡುವ ಹುಚ್ಚಿತ್ತು. ಆದರೆ, ಪತಿ ಅದನ್ನು ವಿರೋಧಿಸಿದ್ದರು. ಹೀಗಾಗಿ ಕೋಪಗೊಂಡ ಪತ್ನಿಯು ತನ್ನ ತಂದೆ-ತಾಯಿಯೊಂದಿಗೆ ಸೇರಿಕೊಂಡು ಹತ್ಯೆ ಮಾಡಿದ್ದಾಳೆ ಎನ್ನಲಾಗಿದೆ.
ಫಫೌತ್ ಗ್ರಾಮದ ರಾಣಿ ಕುಮಾರಿ ಸುಮಾರು 7 ವರ್ಷಗಳ ಹಿಂದೆ ಮಹೇಶ್ವರ್ ನನ್ನ ಮದುವೆಯಾಗಿದ್ದರು. ಮಹೇಶ್ವರ್ ಕೆಲಸಕ್ಕೆ ಹೋಗುವ ವೇಳೆ ಫಫೌತ್ ಗ್ರಾಮದಲ್ಲಿನ ತನ್ನ ಅತ್ತೆಯ ಮನೆಗೆ ಹೋಗಿದ್ದರು ಎನ್ನಲಾಗಿದೆ. ಇನ್ಸ್ಟಾಗ್ರಾಂ ರೀಲ್ಸ್ ವಿಚಾರವಾಗಿ ಮಹೇಶ್ವರ್ ಮತ್ತು ರಾಣಿ ಕುಮಾರಿ ನಡುವೆ ವಾಗ್ವಾದ ನಡೆದಿತ್ತು. ಆಗ ಜಗಳ ವಿಕೋಪಕ್ಕೆ ಹೋಗಿ ಕತ್ತು ಹಿಸುಕಿ ಕೊಲೆ ಮಾಡಿದ್ದಾಳೆ ಎನ್ನಲಾಗಿದೆ.
ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪತ್ನಿ ಬಂಧಿಸಿ ತನಿಖೆ ಕೈಗೊಂಡಿದ್ದಾರೆ.